ಇಂದಿನಿಂದ ಭದ್ರಾ ನೀರಿಗಾಗಿ ಅನಿರ್ದಿಷ್ಟ ಮುಷ್ಕರ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ 5300 ಕೋಟಿ ಹಣ ರು. ಬಿಡುಗಡೆ ಮಾಡದಿರುವುದು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಜಿಲ್ಲೆಯ ಎಲ್ಲಾ ಜನಪರ, ಪ್ರಗತಿಪರ, ಕನ್ನಡ ಪರ, ದಲಿತಪರ ಸಂಘಟನೆಗಳು ಸೇರಿ ಚಿತ್ರದುರ್ಗ ಜಿಲ್ಲೆಯ ಸಂಸದರ ಕಛೇರಿಯ ಮುಂದೆ ಫೆ.5ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡೊವೆ.