ಕ್ಷಯರೋಗ ಮುಕ್ತಗೊಳಿಸಲು ಮನೆಬಾಗಿಲಲ್ಲೇ ಚಿಕಿತ್ಸೆ: ಮೂಗಪ್ಪಯಾರಲ್ಲಿಯಾದರೂ 2 ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಕಫ, ಕಫದಲ್ಲಿ ರಕ್ತ ಬರುವುದು, ತೂಕ ಕಡಿಮೆಯಾಗುವುದು, ಹಸಿವಾಗದಿರುವಂತಹ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸಬೇಕು. ಕ್ಷಯ ರೋಗ ದೃಢಪಟ್ಟರೆ ರೋಗಿಯ ಮನೆ ಬಾಗಿಲಿಗೆ ಉಚಿತವಾಗಿ ಔಷಧಿ ನೀಡುವುದರ ಮುಖಾಂತರ ರೋಗ ನಿಯಂತ್ರಣಕ್ಕೆ ಕಡಿವಾಣ ಹಾಕಲಾಗುತ್ತದೆ.