ಯೂರಿಯಾಗೆ ಸಾಲುಗಟ್ಟಿ ನಿಂತ ಕೃಷಿಕರುಜಿಲ್ಲೆಯ ವಿವಿದೆಡೆ ಸಮೃದ್ಧ ಮಳೆಯಾಗುತ್ತಿದ್ದು, ಕೃಷಿಕರು ತಮ್ಮ ಬೆಳೆಗಳಿಗೆ ಬೇಕಾದ ಯೂರಿಯಾ ರಸಗೊಬ್ಬರ ಪಡೆಯಲು ಬೆಳಿಗ್ಗೆಯಿಂದಲೇ ಎಪಿಎಂಸಿ ಆವರಣ ಸಮೀಪ ಸಾವಿರಾರು ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿತು. ಕೃಷಿಕರ ಈ ಸರದಿಯ ಸಾಲು ಮುಕ್ಕಾಲು ಕಿ.ಮೀ. ದೂರದವರೆಗೂ ಇದ್ದುದು ಯೂರಿಯಾ ಗೊಬ್ಬರಕ್ಕೆ ಇರುವ ಬೇಡಿಕೆಯನ್ನು ಸೂಚಿಸುವಂತಿತ್ತು.