ಕುಷ್ಠರೋಗ ಪತ್ತೆ ತಪಾಸಣೆ ನಿಖರವಾಗಿರಲಿಪೋಲಿಯೋ ಹಾಗೇ ಕುಷ್ಠರೋಗವನ್ನು ಸಹ ದೇಶದಿಂದ ನಿರ್ಮೂಲನೆ ಮಾಡಬೇಕು. ಕುಷ್ಠ ರೋಗ ಮುಕ್ತ ಚಿತ್ರದುರ್ಗ ಜಿಲ್ಲೆ ಎನ್ನುವ ಘೋಷ ವಾಕ್ಯದೊಂದಿಗೆ ಡಿ.27 ರಿಂದ ಜ.11 ವರೆಗೆ ನಡೆಯುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನದಲ್ಲಿ ನಿಖರ ತಪಾಸಣೆ ನಡೆಸಿ, ಶೇ.100 ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು. ಮಂಗಳವಾರ ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.