ಓಎಂಆರ್ ನಿರ್ವಹಣೆ ಮೇಲೆ ಹೆಚ್ಚಿನ ನಿಗಾವಹಿಸಿಡಿಸೆಂಬರ್ 16 ಮತ್ತು 17ರಂದು ಗ್ರೂಪ್-ಸಿ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವತಿಯಿಂದ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕೆಪಿಎಸ್ಸಿ ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಮೇಲ್ವಿಚಾರಣೆ ಹೊಣೆ ಹೊತ್ತ ಅಧಿಕಾರಿಗಲು ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಎಲ್ಲಿಯೂ ಲೋಪಗಳಾಗದಂತೆ ಗಮನ ಹರಿಸಬೇಕೆಂದರು.