ಶಿಕ್ಷಕರ ಸಮಸ್ಯೆಗೆ ಪರಿಹಾರಕ್ಕೆ ಪ್ರಾಮಾಣಿಕ ಶ್ರಮಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ವರ್ಗಾವಣೆ ಸಮಸ್ಯೆ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರ ನಡುವೆ ಇರುವ ವೇತನ ತಾರತಮ್ಯ ಹೋಗಲಾಡಿಸಲು ಪ್ರಾಮಾಣಿಕ ವಾಗಿ ಶ್ರಮಿಸಲಾಗುವುದು ಎಂದು ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದರು.ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಗುರುವಾರ ಭೇಟಿ ನೀಡಿ, ಮತಯಾಚನೆ ಮಾಡಿದರು. ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಪ್ರಥಮ ಪ್ರಾಶಸ್ತ್ಯದ ಮತ ಹಾಕುವ ಮೂಲಕ ಗೆಲ್ಲಿಸುವಂತೆ ಮನವಿ ಮಾಡಿದರು.