ಗುತ್ತಿಗೆದಾರರ ಬೇಡಿಕೆ ಈಡೇರಿಸದೆ ಇದ್ದರೆ ಹೋರಾಟಕ್ಕೆ ಸಿದ್ಧ: ಕೆಂಪಣ್ಣಪ್ರಸ್ತುತ ಎಲ್ಲಾ ವರ್ಗದವರಿಗೂ ವಿಮೆ ಸೌಲಭ್ಯವಿದ್ದು, ಇಲ್ಲಿಯವರೆಗೂ ಗುತ್ತಿಗೆದಾರರಿಗೆ ಮಾತ್ರ ವಿಮಾ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆಯೂ ಸುಮಾರು ಒಂದೂವರೆ ವರ್ಷದಿಂದ ಹೋರಾಟ ನಡೆಸಿದ್ದೇವೆ. ಈ ಬೇಡಿಕೆ ಶೀಘ್ರವೇ ಈಡೇರಲಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದರು.