ಮಹಿಳೆ ಆರ್ಥಿಕವಾಗಿ ಸಬಲವಾದಲ್ಲಿ ಕೌಟುಂಬಿಕ ಹಿಂಸೆ ದೂರಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಬಲ ಇದ್ದರೂ, ಮಹಿಳೆ ಮೇಲಿನ ಹಿಂಸೆ ಪ್ರಕರಣಗಳು ಕಡಿಮೆಯಾಗಿಲ್ಲ. ಹಿಂಸೆ ಅನುಭವಿಸಿದರೂ ಮಹಿಳೆಯರು ದೂರು ನೀಡಲು ಹಿಂದೇಟು ಹಾಕುತ್ತಾರೆ. ಆರ್ಥಿಕವಾಗಿ ಮಹಿಳೆಯರು ಸಬಲವಾದಂತೆ ಅವರ ಮೇಲಿನ ಹಿಂಸೆಯ ಪ್ರಮಾಣವೂ ಸಹ ಕಡಿಮೆಯಾಗುತ್ತವೆ.