ಸಾರ್ವಜನಿಕರ ಅಹವಾಲು ಸ್ವೀಕರಿಸಲು ಶಾಶ್ವತ ಕೌಂಟರ್ಸಾರ್ವಜನಿಕರು ಜಿಲ್ಲೆಯ ವಿವಿಧ ತಾಲೂಕುಗಳಿಂದ ದೂರದೂರುಗಳಿಂದ ಕೆಲಸ ಕಾರ್ಯಗಳಿಗೆ ಅರ್ಜಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸುತ್ತಾರೆ. ಅಂತಹವರು ಇಡೀ ದಿನ ಅಧಿಕಾರಿಗಳ ಭೇಟಿಗಾಗಿ ಕಾಯುವಂತಾಗಬಾರದು. ಅವರ ಸಮಯ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು, ಅರ್ಜಿಗಳನ್ನು ಸ್ವೀಕರಿಸಲು ಶಾಶ್ವತ ಕೌಂಟರ್ ಒಂದನ್ನು ಸ್ಥಾಪಿಸಲಾಗುವುದು.