೨೦೪೭ಕ್ಕೆ ದೇಶ ವಿಕಸಿತ ಭಾರತವಾಗಿ ಪರಿವರ್ತನೆ: ಯದುವೀರ್ರಾಷ್ಟ್ರದಲ್ಲಿ 3ನೇ ಬಾರಿಗೆ ಎನ್ಡಿಎ ಮೈತ್ರಿಕೂಟದ ಸರ್ಕಾರ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದು, ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಮಹಿಳೆಯರು, ರೈತರು, ಕೂಲಿಕಾರರೂ ಸೇರಿದಂತೆ ಎಲ್ಲ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ಮೈಸೂರು ರಾಜವಂಶಸ್ಥರು, ಪ್ರಸ್ತುತ ಮೈಸೂರು- ಕೊಡಗು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಿತ್ರದುರ್ಗದಲ್ಲಿ ಹೇಳಿದ್ದಾರೆ.