ಗಡಿನಾಡ ಸಾಂಸ್ಕೃತಿಕ ಉತ್ಸವಕ್ಕೆ ಸಹಕಾರ ನೀಡಿ: ಬಸವಲಿಂಗ ಶ್ರೀಪ್ರತಿ ವರ್ಷದಂತೆ ಈ ಬಾರಿ ಕೂಡ ಫೆ.15ರಿಂದ17 ರವರೆಗೆ ಮೂರು ದಿನಗಳ ಕಾಲ ಗಡಿನಾಡ ಸಾಂಸ್ಕೃತಿಕ ಉತ್ಸವ ಹಮ್ಮಿಕೊಂಡಿದ್ದು, ಸದ್ಭಕ್ತರು ಉತ್ಸವದ ಯಶಸ್ಸಿಗೆ ಸಹಕಾರ ನೀಡುವಂತೆ ಬಸವಲಿಂಗ ಶ್ರೀ ಹೇಳಿದರು. ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಶಾಖಾ ಮಠದ ಆವರಣದಲ್ಲಿ ನಡೆದ ಗಡಿನಾಡ ಸಾಂಸ್ಕೃತಿಕ ಉತ್ಸವ ಪೂರ್ವಭಾವಿಯಲ್ಲಿ ಮಾತನಾಡಿದರು.