ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳುಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.