ಲೈಂಗಿಕ ದೌರ್ಜನ್ಯ ಮೂಲಭೂತ ಹಕ್ಕಿನ ಉಲ್ಲಂಘನೆಕೆಲಸದ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಮೂಲಭೂತ ಹಾಗೂ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದ್ದು, ಮಹಿಳಾ ನೌಕರರ ಘನತೆ ಕಾಪಾಡುವುದು ಎಲ್ಲ ಪುರಷ ನೌಕರರ ಕರ್ತವ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಹೇಳಿದರು.