ಮಾತೃಭಾಷೆಯಲ್ಲಿಯೇ ಉನ್ನತ ಶಿಕ್ಷಣ ನೀಡುವ ತುರ್ತು ಇದೆ: ಚಂದ್ರಣ್ಣ ಎಚ್.ಟಿ.ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷೆ ಕಠಿಣವಾಗುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದಿಂದ ಇಂಗ್ಲೀಷ್ಗೆ, ಇಂಗ್ಲೀಷ್ನಿಂದ ಕನ್ನಡಕ್ಕೆ ಭಾಷಾಂತರ ಮಾಡುವ ಪ್ರಶ್ನೆಗಳು ಬಂದಾಗ ಕಷ್ಟ ಅನುಭವಿಸುತ್ತಿದ್ದಾರೆ. ಅಂತಹವರಿಗೆ ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ನೀಡಬೇಕಾದ ಅಗತ್ಯವಿದೆ ಎಂದು ಉಪ ನಿರ್ದೇಶಕರ ಕಚೇರಿಯ ಆಂಗ್ಲ ವಿಷಯ ಪರಿವೀಕ್ಷಕ ಚಂದ್ರಣ್ಣ ಎಚ್.ಟಿ. ಹೇಳಿದರು.