ಭದ್ರಾ ಮೇಲ್ದಂಡೆ: ಕೇಂದ್ರ ನೆರವಿಗೆ ರಾಜ್ಯವ್ಯಾಪಿ ಹೋರಾಟಚಿತ್ರದುರ್ಗ: ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಮಧ್ಯಕರ್ನಾಟಕವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉಪೇಕ್ಷೆ ಮಾಡಿರುವುದನ್ನು ರೈತ ಸಂಘ ಗಂಭೀರವಾಗಿ ಪರಿಣಿಸಿದೆ. ಭದ್ರಾ ಮೇಲ್ದಂಡೆ ಕಾಮಗಾರಿಗೆ ಅನುದಾನ ಬಿಡುಗಡೆಗೆ ಆಗ್ರಹಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದೆಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.