ಸಾರಾಂಶ
ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-2025ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ತುಳು ಭವನದಲ್ಲಿ ನಡೆಯಿತು.
ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-2025ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ತುಳು ಭವನದಲ್ಲಿ ನಡೆಯಿತು.
ಮಾಜಿ ಸಚಿವ ಕೃಷ್ಣ ಪಾಲೆಮಾರ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ಸಹಕಾರ ಕ್ಷೇತ್ರದಲ್ಲಿ ಸಾಧನೆಗೈದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ “ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ” ನೀಡಿ ಗೌರವಿಸಿದರು.ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅಧ್ಯಕ್ಷತೆ ವಹಿಸಿದ್ದರು. ಮೂಡುಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಡೂರಿನ ಶಿವ ದುರ್ಗಾಂಭ ಮಠದ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಉಪಸ್ಥಿತರಿದ್ದರು.
ಅದಾನಿ ಗ್ರೂಪ್ ಅಧ್ಯಕ್ಷ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮೋಹನ೦ಗಯ್ಯ ಸ್ವಾಮಿ, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಮತ್ತಿತರರು ಇದ್ದರು.;Resize=(128,128))
;Resize=(128,128))
;Resize=(128,128))