ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡಿ

| Published : May 30 2024, 12:56 AM IST

ಸಾರಾಂಶ

ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ತಿಪಟೂರು

ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸಿದ್ದು, ಸತತವಾಗಿ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಯಾವ ಕಾಲಘಟ್ಟದಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲಾಗಿತ್ತು ಎಂದರು.

ಶಿಕ್ಷಕರ ಪರವಾಗಿ ಹೋರಾಡುವ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಶಿಕ್ಷಕರ ಪರವಾಗಿ ಸದನದ ಹೊರಗೆ ಹಾಗೂ ಒಳಗೆ ಹೋರಾಟ ಮಾಡಿಕೊಂಡು ಬಂದಿರುವ ಡಾ. ವೈ.ಎ. ನಾರಾಯಣಸ್ವಾಮಿಯನ್ನು ಮತ್ತೊಮ್ಮೆ ಗೆಲ್ಲಿಸಬೇಕು ಎಂದರು.