ಪದವೀಧರರು ಎಲ್ಲ ವಿಭಾಗದಲ್ಲಿ ಹರಿದು ಹಂಚಿ ಹೋಗಿದ್ದು, ಅವರಿಗೆ ಉದ್ಯೋಗದ ಭರವಸೆ ನೀಡುವ ಮೂಲಕ ಅವರ ಬದುಕಿಗೆ ಬೆಳಕು ನೀಡುವ ಕಾರ್ಯ ಮಾಡುವುದು ಅಗತ್ಯವಾಗಿದೆ.
ಲಕ್ಷ್ಮೇಶ್ವರ: ರಾಜ್ಯದಲ್ಲಿ ಪದವಿಧರ ಯುವಕರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ 54 ಸಾವಿರ ವಿದ್ಯಾವಂತ ಅರ್ಹರಿಗೆ ಕೆಲವೇ ದಿನಗಳಲ್ಲಿ ಉದ್ಯೋಗ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ತಿಳಿಸಿದರು.
ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ಭಾನುವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪಶ್ಚಿಮ ಪದವೀಧರ ವಿಧಾನಪರಿಷತ್ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಪದವೀಧರರು ಎಲ್ಲ ವಿಭಾಗದಲ್ಲಿ ಹರಿದು ಹಂಚಿ ಹೋಗಿದ್ದು, ಅವರಿಗೆ ಉದ್ಯೋಗದ ಭರವಸೆ ನೀಡುವ ಮೂಲಕ ಅವರ ಬದುಕಿಗೆ ಬೆಳಕು ನೀಡುವ ಕಾರ್ಯ ಮಾಡುವುದು ಅಗತ್ಯವಾಗಿದೆ. ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿ ಬಹಳ ದೊಡ್ಡದು. ಪಕ್ಷದ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ದುಡಿದಲ್ಲಿ ನಮ್ಮ ಗೆಲುವು ಸುಲಭ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ನಿರುದ್ಯೋಗಿ ಪದವಿಧರರಿಗೆ ಮಾಸಿಕ ಭತ್ಯೆ ನೀಡುವ ಮೂಲಕ ಅವರ ಕನಸಿಗೆ ಜೀವ ತುಂಬುವ ಕಾರ್ಯ ಮಾಡುತ್ತಿದ್ದು, ಇದು ನಮ್ಮ ಗೆಲುವಿಗೆ ದೊಡ್ಡ ಶಕ್ತಿ ತುಂಬುತ್ತದೆ ಎಂದರು.
ಈ ವೇಳೆ ಮಾಜಿ ಶಾಸಕ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಲೋಕಸಭಾ ಕ್ಷೇತ್ರದ ಕಾಂಗ್ರೆಸ ಪರಾಜಿತ ಅಭ್ಯರ್ಥಿ ಆನಂದ ಗಡ್ಡದೇವರಮಠ, ಮಾಜಿ ಸಚಿವ ಎಸ್.ವಿ. ನಂಜಯ್ಯನಮಠ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಪಕ್ಷದ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವು ನಿಶ್ಚಿತವೆಂದರು.ಈ ವೇಳೆ ಮಹೇಶ ಹಾರೂಗೇರಿ, ಎಸ್.ಪಿ. ಬಳಿಗಾರ, ಮಹೇಶ ಹೊಗೆಸೊಪ್ಪಿನ ಹಾಗೂ ಶರಣು ಗೋಡಿ ಮಾತನಾಡಿದರು. ವಿ.ಜಿ. ಪಡಗೇರಿ, ಜಿ.ಜೆ. ಆದಪ್ಪ ಗೌಡರ, ದೀಪಕ್ ಲಮಾಣಿ, ರಾಜುಗೌಡ ಪಾಟೀಲ, ಸಾಹೀಬ್ ಜಾನ್ ಹವಾಲ್ದಾರ್, ಮುಕ್ತಿ ಯಾರ್ ಗದಗ, ಚನ್ನಪ್ಪ ಜಗಲಿ, ಸೋಮಣ್ಣ ಬೆಟಗೇರಿ, ಅಮರೀಷ್ ತೆಂಬದಮನಿ, ಸುರೇಶ ನಾವಿ, ಯಲ್ಲಪ್ಪ ತಳವಾರ ಹಾಗೂ ರಂಜನ್ ಪಾಟೀಲ ಇದ್ದರು. ನಿವೃತ್ತ ಮುಖ್ಯಾಧ್ಯಾಪಕ ರಮೇಶ ನವಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಣ್ ನವಲೆ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಆರ್. ಕೊಪ್ಪದ ವಂದಿಸಿದರು.