ನಾಳೆಯಿಂದ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ

| Published : Oct 27 2024, 02:40 AM IST

ಸಾರಾಂಶ

ರಾಯಬಾಗ ಪಟ್ಟಣದ ಭರಮಾ ಅಣ್ಣಪ್ಪ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ ಅ.28 ರಿಂದ 30ರವರೆಗೆ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ಸವ ಯಶಸ್ವಿಗೊಳಿಸಬೇಕು ಎಂದು ಸಂಸ್ಥೆ ಅಧ್ಯಕ್ಷ ಎಲ್.ಬಿ. ಚೌಗುಲೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ರಾಯಬಾಗ

ಪಟ್ಟಣದ ಭರಮಾ ಅಣ್ಣಪ್ಪ ಚೌಗುಲೆ ಶಿಕ್ಷಣ ಸಂಸ್ಥೆಯ ಉತ್ಸವ ಅ.28 ರಿಂದ 30ರವರೆಗೆ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ಸವ ಯಶಸ್ವಿಗೊಳಿಸಬೇಕು ಎಂದು ಸಂಸ್ಥೆ ಅಧ್ಯಕ್ಷ ಎಲ್.ಬಿ. ಚೌಗುಲೆ ಮನವಿ ಮಾಡಿದರು.

ಪಟ್ಟಣದ ಚೌಗುಲೆ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅ.28ರಂದು ಬೆಳಗ್ಗೆ 11ಕ್ಕೆ ಸಂಸ್ಥೆಯ ಉತ್ಸವ ಉದ್ಘಾಟನೆ ಸಮಾರಂಭ ಜರುಗಲಿದ್ದು, ನಂದಿಕುರಳಿ ಪಂಚಲಿಂಗೇಶ್ವರ ಮಠದ ವೀರಭದ್ರ ಸ್ವಾಮೀಜಿ ವಹಿಸಲಿದ್ದಾರೆ. ಉದ್ಘಾಟಕರಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ಖಾಸ್ಗತೇಶ್ವರ್ ಮಠದ ಖಾಸ್ಗತ ಶಿವಯೋಗಿ ಶ್ರೀ ವಿರಕ್ತ ಸ್ವಾಮೀಜಿ ಆಗಮಿಸಲಿದ್ದಾರೆ. ಬೆಳಗಾವಿ ಆರ್‌ಸಿಯು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಸಾನ್ನಿಧ್ಯ, ಸಂಸ್ಥೆ ಅಧ್ಯಕ್ಷ ಎಲ್.ಬಿ.ಚೌಗುಲೆ ಅವರು ಅಧ್ಯಕ್ಷತೆ, ನಿರ್ದೇಶಕ ಅಮರ ನಾಗರಾಳೆ ಗೌರವ ಅಧ್ಯಕ್ಷತೆ ವಹಿಸಲಿದ್ದಾರೆ.

ಅ.29 ರಂದು ಬೆಳಗ್ಗೆ 11ಕ್ಕೆ ನಡೆಯುವ ಹಿರಿಯರ ಸ್ಮರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯವನ್ನು ಹಂಚಿನಾಳ ಭಕ್ತಿ ಯೋಗಾಶ್ರಮದ ಮಹೇಶಾನಂದ ಸ್ವಾಮೀಜಿ ವಹಿಸಲಿದ್ದು, ಅತಿಥಿಗಳಾಗಿ ಹಿರಿಯ ಸಾಹಿತಿ ಮತ್ತು ಚಿತ್ರ ನಿರ್ದೇಶಕ ಡಾ.ರಾಜಶೇಖರ ಮಠಪತಿ (ರಾಗಂ) ಆಗಮಿಸಲಿದ್ದಾರೆ. ಕಾರ್ಯದರ್ಶಿ ವಿನಯ ಚೌಗುಲೆ ಅಧ್ಯಕ್ಷತೆ, ನಿರ್ದೇಶಕಿ ಐಶ್ವರ್ಯ ಚೌಗುಲೆ ಗೌರವ ಅಧ್ಯಕ್ಷತೆ ವಹಿಸಲಿದ್ದಾರೆ. ಅ.30 ರಂದು ಬೆಳಗ್ಗೆ 11ಕ್ಕೆ ಸತೀಶ ಚೌಗುಲೆ (34ನೇ ಜನ್ಮದಿನ) ನೆನಪು ಹಾಗೂ ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಮಮದಾಪುರದ ಮೌನ ಮಲ್ಲಿಕಾರ್ಜುನ ಶಿವಯೋಗಿಗಳು ವಹಿಸಲಿದ್ದು, ಅಥಿಗಳಾಗಿ ರಾಜ್ಯ ಅಗ್ನಿಶಾಮಕ ಮತ್ತು ಸೇವೆಗಳ ಇಲಾಖೆ ಡಿಐಜಿ ರವಿ ಡಿ. ಚನ್ನಣ್ಣವರ ಆಗಮಿಸಲಿದ್ದಾರೆ. ಸಂಸ್ಥೆ ಅಧ್ಯಕ್ಷ ಎಲ್.ಬಿ. ಚೌಗುಲೆ ಅಧ್ಯಕ್ಷತೆ, ಉಪಾಧ್ಯಕ್ಷೆ ಭಾರತಿ ಚೌಗುಲೆ ಗೌರವ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ವಿನಯ ಚೌಗುಲೆ, ನಿರ್ದೇಶಕಿ ಐಶ್ವರ್ಯ ಚೌಗುಲೆ, ಪ್ರಾಚಾರ್ಯ ಎಸ್.ಎಸ್.ದಿಗ್ಗೆವಾಡಿ, ಶಿವಾನಂದ ನಾಂದಣಿ ಇದ್ದರು.