ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೇಲಿ ಗುಣಮಟ್ಟದ ಶಿಕ್ಷಣ: ಶಾಸಕ ಗಣೇಶ್‌ ಪ್ರಸಾದ್‌

| Published : Dec 21 2024, 01:16 AM IST

ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೇಲಿ ಗುಣಮಟ್ಟದ ಶಿಕ್ಷಣ: ಶಾಸಕ ಗಣೇಶ್‌ ಪ್ರಸಾದ್‌
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯಲ್ಲಿ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಸಂಜೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ೯ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಗುಂಡ್ಲುಪೇಟೆ: ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಸಂಜೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ೯ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಕ್ರೈಸ್ಟ್‌ ಸಿಎಂಐ ಶಾಲೆಯು ಮತ್ತಷ್ಟು ಎತ್ತರಕ್ಕೇರಲಿ ಎಂದರು. ಶಿಕ್ಷಣ ಪ್ರತಿಯೊಬ್ಬರ ಹಕ್ಕಾಗಿದೆ. ಶಿಕ್ಷಣ ಇದ್ದರೆ ಮಾತ್ರ ಈ ಸ್ಪರ್ಧಾತ್ಮಕ ಯುಗದಲ್ಲಿ ಜೀವನ ನಡೆಸಲು ಸಾದ್ಯ. ಶಿಕ್ಷಣ ಪಡೆದು ಜ್ಞಾನವಂತರಾಗಿ ಎಂದು ಕಿವಿಮಾತು ಹೇಳಿದರು. ಮಹದೇವಪ್ರಸಾದ್‌ ಅವರು ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ನಾನು ಕೂಡ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇನೆ ಮುಂದೆಯೂ ನೀಡುತ್ತೇನೆ ಎಂಬ ಭರವಸೆ ನೀಡಿದರು.

ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು:

ಹಾಸ್ಯ ಕಲಾವಿದ ರಿಚರ್ಡ್ ಲೂಯಿಸ್, ಮೈಸೂರು ಆನಂದ್, ಕಿರ್ಲೋಸ್ಕರ್ ಸತ್ಯ ಸಮಾರಂಭದಲ್ಲಿ ತಮ್ಮದೇ ಆದ ಶೈಲಿಯಲ್ಲಿ ನಗೆ ಹಬ್ಬದಲ್ಲಿ ಮಾತನಾಡಿ ನೆರೆದಿದ್ದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರು. ಪುರಸಭೆ ಅಧ್ಯಕ್ಷ ಕಿರಣ್‌ ಗೌಡ, ಕ್ಯಾಲಿಕಟ್‌ನ ಸೆಂಟ್ ಪ್ರಾವಿನ್ಸ್ ಪ್ರಾಂತೀಯ ಅಧ್ಯಕ್ಷ ಡಾ.ಬಿಜು ಜಾನ್ ವೆಲ್ಲಕಡ, ಕ್ರೈಸ್ಟ್‌ ಸಿಎಂಐ ಪಬ್ಲಿಕ್‌ ಶಾಲೆಯ ಮುಖ್ಯ ಶಿಕ್ಷಕ ಫಾದರ್ ರಿಜೀಶ್ ಪುತಿಯಾಪರಂಬಿಲ್, ಶಿಕ್ಷಕರಾದ ದೊಡ್ಡಪ್ಪಾಜಿ, ಶಿಕ್ಷಕರಾದ ಮಹೇಶ್, ಅನಿಲ್, ಬಿಂದು ರಾಯ್ ಹಾಗೂ ಬೋಧಕ, ಬೋಧಕೇತರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.