ಸಾರಾಂಶ
ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟ
ಕನ್ನಡಪ್ರಭ ವಾರ್ತೆ ಉಡುಪಿಹಿಂಸೆಗೆ ಉತ್ತರವಾಗಿ ಪ್ರೀತಿಯನ್ನು ತಿಳಿಸಲು ಯೇಸು ಕ್ರಿಸ್ತರು ಧರೆಯಲ್ಲಿ ಹುಟ್ಟಿ ಬಂದರು. ಆದ್ದರಿಂದ ಇಡೀ ಮನುಕುಲವೇ ಜಾತಿ ಮತಗಳ ಭೇದವಿಲ್ಲದೆ ಆಚರಿಸುವ ಹಬ್ಬ ಕ್ರಿಸ್ತ ಜಯಂತಿ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಅವರು ಮಂಗಳವಾರ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಆಯೋಜಿಸಿದ್ದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪ್ರಬಂಧಕ ರಾಘವೇಂದ್ರ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಎಚ್., ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಶುಭ ಹಾರೈಸಿದರು.
2023ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸುವರ್ಣ ನ್ಯೂಸ್ ವಾಹಿನಿಯ ಕ್ಯಾಮರಾಮೆನ್ ಹರೀಶ್ ಸುವರ್ಣ ಬಲಾಯಿಪಾದೆ ಅವರಿಗೆ ಗೌರವಿಸಲಾಯಿತು.ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ಡಾ|ರೋಶನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ, ಧರ್ಮಗುರುಗಳಾದ ವಂ|ವಲೇರಿಯನ್ ಮೆಂಡೊನ್ಸಾ, ವಂ|ಚಾರ್ಲ್ಸ್ ಮಿನೇಜಸ್, ಅನುಗ್ರಹ ಪಾಲನಾ ಕೇಂದ್ರದ ನಿರ್ದೇಶಕ ವಂ|ವಿನ್ಸೆಂಟ್ ಕ್ರಾಸ್ತಾ ಉಪಸ್ಥಿತರಿದ್ದರು.
ಉಜ್ವಾಡ್ ಪತ್ರಿಕೆಯ ಸಂಪಾದಕ ವಂ|ಆಲ್ವಿನ್ ಸಿಕ್ವೇರಾ ಸ್ವಾಗತಿಸಿ, ಮಾಧ್ಯಮ ಸಂಯೋಜಕ ಮೈಕಲ್ ರೊಡ್ರಿಗಸ್ ವಂದಿಸಿದರು. ವಂ|ಸಿರಿಲ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.