ದೊಡ್ಡಬಳ್ಳಾಪುರ: ಇಲ್ಲಿನ ವೀರಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ ವತಿಯಂದ ಶ್ರೀಮದ್ವಿರಾಟ್‌ ಪೋತಲೂರಿ ವೀರಬ್ರಹ್ಮೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮ ಕನ್ನಡ ಜಾಗೃತ ಭವನದಲ್ಲಿ ಸಂಭ್ರಮದಿಂದ ನಡೆಯಿತು.

ದೊಡ್ಡಬಳ್ಳಾಪುರ: ಇಲ್ಲಿನ ವೀರಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ ವತಿಯಂದ ಶ್ರೀಮದ್ವಿರಾಟ್‌ ಪೋತಲೂರಿ ವೀರಬ್ರಹ್ಮೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ಕಾರ್ಯಕ್ರಮ ಕನ್ನಡ ಜಾಗೃತ ಭವನದಲ್ಲಿ ಸಂಭ್ರಮದಿಂದ ನಡೆಯಿತು.

ಈ ವೇಳೆ ಮಾತನಾಡಿದ ವೀರಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ವೀರಬ್ರಹ್ಮೇಂದ್ರ ಸ್ವಾಮಿಗಳ ಆರಾಧನೆ ಮೂಲಕ ಅವರ ತತ್ವಗಳನ್ನು ತಿಳಿಸಲು ಟ್ರಸ್ಟ್‌ ವತಿಯಿಂದ ಹಲವು ವರ್ಷಗಳಿಂದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ವೀರಬ್ರಹ್ಮಯ್ಯನವರ ಕಾಲಜ್ಞಾನ ವೈಜ್ಞಾನಿಕ ಸತ್ಯಗಳನ್ನು ಹೇಳುತ್ತಾ ಬಂದಿದ್ದು, ಅವರ ಮಾತುಗಳು ಬಹುಪಾಲು ನಿಜವಾಗಿವೆ. ಜ್ಞಾನದ ಕೊರತೆಯಿಂದ ವೈಜ್ಞಾನಿಕ ಸತ್ಯಗಳಿಂದ ದೂರ ಉಳಿದಿದ್ದೇವೆ. ಪ್ರಕೃತಿ ನಾಶ ಮನುಕುಲದ ವಿನಾಶಕ್ಕೆ ಮೂಲ ಎಂಬುದನ್ನು ಅರಿಯಬೇಕಿದೆ ಎಂದರು.

ಟ್ರಸ್ಟ್ ಅಧ್ಯಕ್ಷ ವೆಂಕಟಾಚಲಪತಿ ಮಾತನಾಡಿ, ವೀರಬ್ರಹ್ಮಯ್ಯನವರ ತತ್ವಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ಅವರ ಆರಾಧನೆಯನ್ನು ಅರ್ಥಪೂರ್ಣವಾಗಿಸಬೇಕಿದೆ ಎಂದು ತಿಳಿಸಿದರು.

ಇದೇ ವೇಳೆ ವಿಶ್ವಕರ್ಮ ಸಮುದಾಯದ ಹಿರಿಯರನ್ನು ಅಭಿನಂದಿಸಲಾಯಿತು. ವಿಶೇಷವಾಗಿ ಅಲಂಕರಿಸಲಾಗಿದ್ದ ವೀರಬ್ರಹ್ಮೇಂದ್ರಸ್ವಾಮಿಗಳ ಭಾವಚಿತ್ರಕ್ಕೆ ವಿಶ್ವಕರ್ಮ ಸಮುದಾಯದ ಮುಖಂಡರು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿನಿಯೋಗ ಮಾಡಲಾಯಿತು. ವಿವಿಧ ಕಲಾವಿದರುಗಳಿಂದ ಗೀತಗಾಯನ ಕಾರ್ಯಕ್ರಮ ನಡೆಯಿತು. ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.21ಕೆಡಿಬಿಪಿ7- ದೊಡ್ಡಬಳ್ಳಾಪುರದಲ್ಲಿ ವೀರಬ್ರಹ್ಮೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ ಪದಾಧಿಕಾರಿಗಳು ಆರಾಧನಾ ಮಹೋತ್ಸವದಲ್ಲಿ ವಿಶ್ವಕರ್ಮ ಸಮುದಾಯದ ಹಿರಿಯರನ್ನು ಗೌರವಿಸಿದರು.