ಚುಂಚನಗಿರಿ ಜಾತ್ರಾ ಮಹೋತ್ಸವ: ಕಾಲಭೈರವೇಶ್ವರ, ಗಂಗಾಧರೇಶ್ವರ ಸ್ವಾಮಿಗೆ ವಿವಿಧ ಪೂಜೆ

| Published : Mar 23 2024, 01:06 AM IST

ಚುಂಚನಗಿರಿ ಜಾತ್ರಾ ಮಹೋತ್ಸವ: ಕಾಲಭೈರವೇಶ್ವರ, ಗಂಗಾಧರೇಶ್ವರ ಸ್ವಾಮಿಗೆ ವಿವಿಧ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಕಳೆದ 5 ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ವಿವಿಧ ಪೂಜೆಗಳು ನೆರವೇರುತ್ತಿದ್ದು ಪ್ರತಿ ದಿನ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಸಂಜೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ ಉತ್ಸವ ಹಾಗೂ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಾಲಕಿ ಉತ್ಸವ ಕೂಡ ಬಹಳ ಸಡಗರ ಸಂಭ್ರಮದಿಂದ ನಡೆಯಿತು.

ಕನ್ನಡಪ್ರಭ ವಾರ್ತೆ ನಾಗಮಂಗಲತಾಲೂಕಿನ ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಶ್ರೀಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚ ಅಲಂಕಾರ ಪೂಜೆ, ಶ್ರೀ ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆ ಬಹಳ ವಿಜೃಂಭಣೆಯಿಂದ ನೆರವೇರಿತು.

ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಕಳೆದ 5 ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ವಿವಿಧ ಪೂಜೆಗಳು ನೆರವೇರುತ್ತಿದ್ದು ಪ್ರತಿ ದಿನ ಸಾವಿರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಶುಕ್ರವಾರ ಸಂಜೆ ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ ಉತ್ಸವ ಹಾಗೂ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಾಲಕಿ ಉತ್ಸವ ಕೂಡ ಬಹಳ ಸಡಗರ ಸಂಭ್ರಮದಿಂದ ನಡೆಯಿತು.

ಸಾಧು, ಸಂತರು ಹಾಗೂ ಭಕ್ತರು ಶ್ರೀ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ ಉತ್ಸವ ಹಾಗೂ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಮುತ್ತಿನ ಪಾಲಕಿ ಉತ್ಸವ ಹೊತ್ತು ಭೈರವನ ಕ್ಷೇತ್ರದಲ್ಲಿ ಮೆರವಣಿಗೆ ಮಾಡಿ ಪೂಜೆ ಸಮರ್ಪಿಸಿದರು.

ಶ್ರೀಕಾಲಭೈರವೇಶ್ವರ ಹಾಗೂ ಶ್ರೀ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನವನ್ನು ಹಸಿರು ಚಪ್ಪರ, ಹೂ ಮತ್ತು ವಿದ್ಯುತ್ ದೀಪಾಲಂಕಾರದಿಂದ ಶೃಂಗಾರ ಮಾಡಲಾಯಿತು. ಪೂಜೆಯಲ್ಲಿ ನೆರೆದಿದ್ದ ಭಕ್ತರು ದೇವರ ಹಾಗೂ ಶ್ರೀಗಳ ಆಶೀರ್ವಾದ ಪಡೆದರು.

ಈ ವೇಳೆ ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಚೈತನ್ಯನಾಥ ಸ್ವಾಮೀಜಿ, ಬ್ರಹ್ಮಚಾರಿ ಸತ್ಕೀರ್ತಿನಾಥಜೀ, ಬ್ರಹ್ಮಚಾರಿ ಮಂಜುನಾಥಜೀ, ಡಾ.ಎ.ಟಿ.ಶಿವರಾಮು ಸೇರಿದಂತೆ ಹಲವು ಭಕ್ತರು, ಸಾಧುಗಳು ಹಾಜರಿದ್ದರು.ಇಂದು ಚಂದ್ರಮಂಡಲೋತ್ಸವ

ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.23 ರಂದು ಬಿಜಿಎಸ್ ಡರ್ಟ್ ಟ್ರಾಕ್ ಬೈಕ್ ರೇಸ್, ಸಂಜೆ 6 ಕ್ಕೆ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಜ್ವಾಲಾಪೀಠಾರೋಹಣ ಮತ್ತು ಸಿದ್ಧಸಿಂಹಾಸನ ಪೂಜೆ ರಾತ್ರಿ 8 ಕ್ಕೆ ಚಂದ್ರಮಂಡಲೋತ್ಸವ ನಡೆಯಲಿದೆ.ವಿಜೃಂಭಣೆಯಿಂದ ನಡೆದ ಶ್ರೀಸಿದ್ದೇಶ್ವರ ಸ್ವಾಮಿ ಉತ್ಸವ

ನಾಗಮಂಗಲ:ಆದಿಚುಂಚನಗಿರಿಯಲ್ಲಿ ಗುರುವಾರ ರಾತ್ರಿ ಶ್ರೀಸಿದ್ದೇಶ್ವರ ಸ್ವಾಮಿ ಉತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.ನೂರಾರು ಭಕ್ತರ ಸಮ್ಮುಖದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ರಥೋತ್ಸವದ ಬೀದಿಯಲ್ಲಿ ಶ್ರೀ ವಿನಾಯಕನಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀಗಳು ಶ್ರೀ ಸಿದ್ದೇಶ್ವರ ಸ್ವಾಮಿ ಉತ್ಸವಕ್ಕೆ ಚಾಲನೆ ನೀಡಿದರು.ಮಂಗಳವಾದ್ಯ, ಗೋವುಗಳೊಂದಿಗೆ ಶ್ರೀ ಸಿದ್ದೇಶ್ವರ ಸ್ವಾಮಿ ಉತ್ಸವ ನಡೆಯಿತು. ಶ್ರೀಗಳು ಆಗಮಿಸಿದ ಭಕ್ತರಿಗೆ ಪ್ರಸಾದ ವಿತರಿಸಿದರು. ನಂತರ ಗೋ ಪೂಜೆ ಸಲ್ಲಿಸಿ ಪ್ರಸಾದ ನೀಡಿದರು.