ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ

| Published : Mar 27 2024, 01:09 AM IST

ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.

- ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರಫೋಟೋ- 26ಎಂವೈಎಸ್ 47- ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್ ಇದ್ದಾರೆ.---

ಕನ್ನಡಪ್ರಭ ವಾರ್ತೆ ಮೈಸೂರು

ಪಕ್ಷ ಸಂಘಟನೆ ಮತ್ತು ಚುನಾವಣೆ ತಯಾರಿ ಕುರಿತು ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೈಸೂರು ಮತ್ತು ಕೊಡಗು ಪ್ರವಾಸ ಮಾಡುವರು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.

ಲೋಕಸಭಾ ಚುನಾವಣೆ ಎದುರಿಸಲು ರೂಪುರೇಷೆ ತಯಾರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೆಡಿಎಸ್ ಮತ್ತು ಬಿಜೆಪಿ ಒಗ್ಗೂಡಿ ಚುನಾವಣೆ ಎದುರಿಸುತ್ತಿರುವುದರಿಂದ ಬಿಜೆಪಿಗೆ ಆನೆ ಬಲ ಬಂದಿದೆ. ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲು ನಾವು ಕೂಡ ರಾಜಕೀಯ ತಂತ್ರಗಾರಿಕೆ ಮಾಡುತ್ತೇವೆ. ಇದು ಕೋರ್ ಕಮಿಟಿ ಸಭೆಯಾಗಿದ್ದು, ಚುನಾವಣೆ ಎದುರಿಸಲು ಎರಡು ಪಕ್ಷಗಳ ರಾಜ್ಯಾಧ್ಯಕ್ಷರು, ನಮಗೆ ಕೆಲವು ಮಾರ್ಗದರ್ಶನ ನೀಡಡುವುದಾಗಿ ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ರಾಜೀವ್ ಬಿಟ್ಟರೆ ಪಕ್ಷಕ್ಕೆ ತೊಂದರೆ ಇಲ್ಲ

ಎಂಡಿಎ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಅವರು ಪಕ್ಷ ತೊರೆಯುವುದರಿಂದ ಬಿಜೆಪಿಗೆ ಯಾವುದೇ ತೊಂದರೆ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲೇ ಅವರು ಬಿಜೆಪಿ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ರಾಜೀವ್ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಅವರ ಮನವೊಲಿಸುವ ಪ್ರಯತ್ನ ಮಾಡುವುದಿಲ್ಲ ಎಂದರು.

ಯಾರೋ ಇಬ್ಬರು, ಮೂವರು ಪಕ್ಷ ಬಿಟ್ಟು ಹೋದರೆ ಯಾವುದೇ ತೊಂದರೆ ಆಗುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಜನರು ಬರುತ್ತಾರೆ. ಇದಕ್ಕೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಚುನಾವಣೆ ವೇಳೆ ಪಕ್ಷಾಂತರಿಸುವುದು ಸಹಜ. ಇದರಿಂದ ಪಕ್ಷಕ್ಕೆ ನಷ್ಟವಾಗದು ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಗಿರಿಧರ್ ಇದ್ದರು.

ಕಾಂಗ್ರೆಸ್ ಒಕ್ಕಲಿಗ ವಿರೋಧಿಯಾಗಿದ್ದು, ಒಕ್ಕಲಿಗರಿಗೆ ಟಿಕೆಟ್ ಕೊಡಲು 41 ವರ್ಷ ಬೇಕಿತ್ತಾ? ಹಾಳಾದ ಊರಿಗೆ ಉಳಿದವನೇಗೌಡ ಎಂದು ಲಕ್ಷ್ಮಣ್ ಗೆ ಟಿಕೆಟ್ ಕೊಟ್ಟಿದ್ದಾರೆ. ಇದಕ್ಕೂ ಮೊದಲು ಏಕೆ ಒಕ್ಕಲಿಗ ಸಮುದಾಯಕ್ಕೆ ಅವಕಾಶ ಕೊಡಲಿಲ್ಲ.

- ಎಲ್. ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ.