ಸಾರಾಂಶ
ಹೊಸಕೋಟೆ: ದೇಶದ ಪ್ರತಿಯೊಬ್ಬ ನಾಗರಿಕನೂ ಸಮಾನತೆ, ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಸಂವಿಧಾನದಡಿ ಅಳವಡಿಸಿಕೊಂಡಿದ್ವೇವೆ ಎಂದು ಎಲ್ಲರಿಗೂ ತಿಳಿಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
ಹೊಸಕೋಟೆ: ದೇಶದ ಪ್ರತಿಯೊಬ್ಬ ನಾಗರಿಕನೂ ಸಮಾನತೆ, ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಸಂವಿಧಾನದಡಿ ಅಳವಡಿಸಿಕೊಂಡಿದ್ವೇವೆ ಎಂದು ಎಲ್ಲರಿಗೂ ತಿಳಿಯಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
ನಗರದ ಮೇದಾಶ್ರೀ ಒಲಂಪಿಯಾಡ್ ಶಾಲಾ ಆವರಣದಲ್ಲಿ ವಕೀಲರ ಸಂಘ, ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ದೇಶಕ್ಕೆ ಸಂವಿಧಾನ ರಚಿಸಿದರು. ಪ್ರತಿಯೊಬ್ಬ ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಹಂತದಲ್ಲೂ ಕಾನೂನಡಿಯೇ ಬದುಕುತ್ತಿರುತ್ತಾನೆ. ಕಾನೂನು ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.ವಕೀಲರ ಸಂಘದ ಅಧ್ಯಕ್ಷ ಎಂ ವೆಂಕಟಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲೇ ಕಾನೂನು ಅರಿವು ಮೈಗೂಡಿಸಿಕೊಳ್ಳಬೇಕು. ಮಕ್ಕಳಿಗೂ ಕಾನೂನಿನಲ್ಲಿ ಹಕ್ಕುಗಳನ್ನು ಜಾರಿ ಮಾಡಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಸಂವಿಧಾನದಲ್ಲಿ ಅತ್ಯುತ್ತಮ ಕಾಯ್ದೆಗಳನ್ನು ರಚಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಮುತ್ಕೂರು ನಾ. ಮನೋಹರ್, ವಕೀಲರ ಸಂಘದ ಉಪಾಧ್ಯಕ್ಷ ಕೆ ನಾಗರಾಜ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಖಜಾಂಚಿ ರವಿ ಕುಮಾರ್, ಪ್ರಾಂಶುಪಾಲ ಮುನೇಶ್, ನಿವೃತ್ತ ಪ್ರಾಂಶುಪಾಲ ಅಶ್ವತ್ ನಾರಾಯಣ್, ಮೇಧಶ್ರೀ ಶಾಲೆ ಖಜಾಂಚಿ ಬೀರಪ್ಪ ಹಾಜರಿದ್ದರು.ಫೋಟೋ: 26 ಹೆಚ್‌ಎಸ್‌ಕೆ 1ಹೊಸಕೋಟೆಯ ಮೇದಶ್ರೀ ಶಾಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ಉದ್ಘಾಟಿಸಿದರು.