ಮಾದರಿ ನಗರಕ್ಕೆ ನಾಗರಿಕರ ಸಹಭಾಗಿತ್ವ ಅಗತ್ಯ: ಜ್ಯೋತಿ

| Published : Oct 04 2025, 12:00 AM IST

ಮಾದರಿ ನಗರಕ್ಕೆ ನಾಗರಿಕರ ಸಹಭಾಗಿತ್ವ ಅಗತ್ಯ: ಜ್ಯೋತಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾನಗರದ ಸ್ವಚ್ಛತೆ ಹಾಗೂ ಪರಿಸರದ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮಹಾನಗರ ಪಾಲಿಕೆಯು ಸಹ ನಗರವನ್ನು ಹಸಿರು ಮತ್ತು ಶುಚಿಯಾಗಿಡಲು ನಿರಂತರವಾಗಿ ಶ್ರಮಿಸುತ್ತಿದೆ.

ಹುಬ್ಬಳ್ಳಿ:ಹುಬ್ಬಳ್ಳಿ- ಧಾರವಾಡ ಮಹಾನಗರವನ್ನು ಮಾದರಿ ನಗರವನ್ನಾಗಿ ಪರಿವರ್ತಿಸಲು ನಾಗರಿಕರು ಸಹಕಾರ ಹಾಗೂ ಸಹಭಾಗಿತ್ವ ನೀಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ ಹೇಳಿದರು.

ಇಲ್ಲಿಯ ಪಾಲಿಕೆ ಆವರಣದಲ್ಲಿ 66 ನೂತನ ಕಸ ಸಂಗ್ರಹಿಸುವ ಆಟೋ ಟಿಪ್ಪರ್‌ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ನಗರದ ಸ್ವಚ್ಛತೆ ಹಾಗೂ ಪರಿಸರದ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮಹಾನಗರ ಪಾಲಿಕೆಯು ಸಹ ನಗರವನ್ನು ಹಸಿರು ಮತ್ತು ಶುಚಿಯಾಗಿಡಲು ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ನಗರದ ಸ್ವಚ್ಛತೆ ಹಿತದೃಷ್ಟಿಯಿಂದ ಪಾಲಿಕೆಯಿಂದ 66 ಹೊಸ ಆಟೋಟಿಪ್ಪರ್ ಖರೀದಿಸಿ ನೈರ್ಮಲ್ಯಕ್ಕೆ ಒತ್ತು ನೀಡಲಾಗುತ್ತಿದೆ. ಹಾಗಾಗಿ ಕಸವನ್ನು ಎಲ್ಲೆಂದ್ರರಲ್ಲಿ ಚೆಲ್ಲದೇ, ಮನೆ-ಮನೆಗೆ ಕಸ ಸಂಗ್ರಹಿಸಲು ಬರುವ ಆಟೋ ಟಿಪ್ಪರ್‌ಗೆ ಹಾಕಬೇಕು. ಆ ಮೂಲಕ ನಗರದ ಸ್ವಚ್ಛತೆಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪಮೇಯರ್ ಸಂತೋಷ ಚವ್ಹಾಣ, ಸಭಾನಾಯಕ ಈರೇಶ ಅಂಚಟಗೇರಿ, ಮಾಜಿ ಮೇಯರ್ ರಾಮಪ್ಪ ಬಡಿಗೇರ, ಸದಸ್ಯರಾದ ರಾಜಣ್ಣ ಕೊರವಿ, ರೂಪಾ ಶೆಟ್ಟಿ, ಶಂಕರ ಶೆಳಕೆ ಸೇರಿದಂತೆ ಇತರರು ಇದ್ದರು.