ಕನ್ನಡ ರಾಜ್ಯೋತ್ಸವ ವಿಶಿಷ್ಟ ಆಚರಣೆಗೆ ನಾಗರಿಕರೆಲ್ಲ ಸ್ಪಂದಿಸಲಿ: ಡಿಸಿ ಡಾ.ಸೆಲ್ವಮಣಿ
KannadaprabhaNewsNetwork | Published : Oct 31 2023, 01:15 AM IST / Updated: Oct 31 2023, 01:16 AM IST
ಕನ್ನಡ ರಾಜ್ಯೋತ್ಸವ ವಿಶಿಷ್ಟ ಆಚರಣೆಗೆ ನಾಗರಿಕರೆಲ್ಲ ಸ್ಪಂದಿಸಲಿ: ಡಿಸಿ ಡಾ.ಸೆಲ್ವಮಣಿ
ಸಾರಾಂಶ
ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ50 ಹೆಸರಾಯಿತು ಕರ್ನಾಟಕಉಸಿರಾಗಲಿ ಕನ್ನಡ ಎಂದು ಘೋಷವಾಕ್ಯದ ರಂಗೋಲಿ ಬರೆಯಬೇಕು
ಕನ್ನಡಪ್ರಭ ವಾರ್ತೆ ಶಿವಮೊಗ್ಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ರಾಜ್ಯದ ಪ್ರತಿಯೊಬ್ಬ ನಾಗರಿಕರು ಅದನ್ನು ಅನುಸರಿಸುವ ಮೂಲಕ ಕನ್ನಡಾಭಿಮಾನ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಕೋರಿದ್ದಾರೆ. ರಾಜ್ಯೋತ್ಸವ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ನಡೆಸಿ, ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲಾದ್ಯಂತ ಪ್ರತಿಯೊಬ್ಬರು ಸಿದ್ಧತೆ ಮಾಡಿಕೊಳ್ಳಬೇಕು ಎಂದಿದ್ದಾರೆ. ನ.1ರಂದು ಜಿಲ್ಲೆಯ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ: ಉಸಿರಾಗಲಿ ಕನ್ನಡ " ಎಂದು ಘೋಷವಾಕ್ಯದ ರಂಗೋಲಿ ಬರೆಯಬೇಕು. ಅಂದು ಬೆಳಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರು ತಾವು ಇರುವಲ್ಲಿಯೇ ಎದ್ದು ನಿಂತು ಗೌರವ ಸಲ್ಲಿಸಬೇಕು. ಅದೇ ದಿನ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟಗಳನ್ನು ಹಾರಿಸಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಬೇಕು. ಸಂಜೆ 7 ಗಂಟೆಗೆ ಎಲ್ಲ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವಂತೆ ಮನವಿ ಮಾಡಿದ್ದಾರೆ. ಈ ಮಾರ್ಗಸೂಚಿಯನ್ನು ಅನುಸರಿಸುವುದರ ಮೂಲಕ ರಾಜ್ಯೋತ್ಸವವನ್ನು ಇನ್ನಷ್ಟು ಸಂಭ್ರಮದಿಂದ ಆಚರಿಸಲು ಜಿಲ್ಲೆಯ ಸಮಸ್ತ ನಾಗರೀಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ನಾಡು-ನುಡಿಯ ಅಭಿಮಾನದೊಂದಿಗೆ ಪ್ರತಿಯೊಬ್ಬರು ಅಳವಡಿಸಿಕೊಂಡು ಯಶಸ್ವಿಗೊಳಿಸಲು ಕೋರಿದ್ದಾರೆ. - - - ಬಾಕ್ಸ್ ಮಾರ್ಗಸೂಚಿ ಏನೇನು? - ನ.1ರಂದು ಜಿಲ್ಲೆಯ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ-50 "ಹೆಸರಾಯಿತು ಕರ್ನಾಟಕ: ಉಸಿರಾಗಲಿ ಕನ್ನಡ " ಎಂದು ಘೋಷವಾಕ್ಯದ ರಂಗೋಲಿ ಬರೆಯಬೇಕು - ಬೆಳಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ ಆಗುವಾಗ ನಾಗರೀಕರು ಇರುವಲ್ಲಿಯೇ ಎದ್ದು ನಿಂತು ಗೌರವ ಸಲ್ಲಿಸಬೇಕು - ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿಪಟಗಳನ್ನು ಹಾರಿಸಬೇಕು - ಸಂಜೆ 7 ಗಂಟೆಗೆ ಎಲ್ಲ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ದೀಪ ಹಚ್ಚಬೇಕು - - - (-ಸಾಂದರ್ಭಿಕ ಚಿತ್ರ)