ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರಿಸಿರುವ ನಾಲ್ಕು ತಿಂಗಳ ವೇತನವನ್ನು ಕೂಡಲೇ ಪಾವತಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ಪಾಲಿಟೆಕ್ನಿಕ್‌ ಹೊರಗುತ್ತಿಗೆ ನೌಕರರ ಸಂಘ (ಸಿಐಟಿಯು) ದಕ್ಷಿಣ ಕನ್ನಡ-ಉಡುಪಿ ವತಿಯಿಂದ ನಗರದ ಕ್ಲಾಕ್‌ ಟವರ್‌ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮಂಗಳೂರು: ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರಿಸಿರುವ ನಾಲ್ಕು ತಿಂಗಳ ವೇತನವನ್ನು ಕೂಡಲೇ ಪಾವತಿಸುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ಪಾಲಿಟೆಕ್ನಿಕ್‌ ಹೊರಗುತ್ತಿಗೆ ನೌಕರರ ಸಂಘ (ಸಿಐಟಿಯು) ದಕ್ಷಿಣ ಕನ್ನಡ-ಉಡುಪಿ ವತಿಯಿಂದ ನಗರದ ಕ್ಲಾಕ್‌ ಟವರ್‌ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಬಜಾಲ್‌ ಮಾತನಾಡಿ, ಗುತ್ತಿಗೆ ಕಾರ್ಮಿಕರ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ಸರ್ಕಾರ ಅದನ್ನು ಪಾಲಿಸುತ್ತಿಲ್ಲ. ಇದೀಗ ನೌಕರರ ಪರವಾಗಿ ಸಿಐಟಿಯು ನೇತೃತ್ವದಲ್ಲಿ ಹೋರಾಟಕ್ಕೆ ಇಳಿಯಲಾಗಿದೆ. ಕಾನೂನಾತ್ಮಕವಾಗಿ ಹೋರಾಡಿ ಸರ್ಕಾರದ ಗಮನ ಸೆಳೆಯುವ ರೀತಿಯಲ್ಲಿ ಹೋರಾಟ ಮಾಡುತ್ತೇವೆ ಎಂದರು. ಹೊರಗುತ್ತಿಗೆ ನೌಕರರಿಗೆ ಎಲ್ಲ ಸೌಲಭ್ಯಗಳ ಜೊತೆ, ಗುತ್ತಿಗೆ ನೌಕರರ ಕಾಯಂ ಮಾಡಬೇಕು ಎಂದು ಅವರು ಆಗ್ರಹಿಸಿದರು. ಆದಷ್ಟು ಶೀಘ್ರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಹೋರಾಟ ನಡೆಸಿ ಬೇಡಿಕೆಗಳ ಈಡೇರಿಸಲು ಒತ್ತಾಯಿಸುತ್ತೇವೆ ಎಂದರು.ಪ್ರಮುಖರಾದ ಪುರುಷೋತ್ತಮ ಎಸ್.ಬಂಗೇರ, ತುಳಸಿ, ರಿಜ್ವಾನ್ ಹರೇಕಳ, ನಾಗೇಶ್ ಕೋಟ್ಯಾನ್, ಗಿರಿಯಪ್ಪ, ಸುಧಾಕರ ಪೂಜಾರಿ, ದಿವ್ಯಾ ಮತ್ತಿತರರು ಇದ್ದರು.