ತುಟ್ಟಿಭತ್ಯೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನಾ ಪ್ರದರ್ಶನ

| Published : Jun 08 2024, 12:34 AM IST

ತುಟ್ಟಿಭತ್ಯೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನಾ ಪ್ರದರ್ಶನ
Share this Article
  • FB
  • TW
  • Linkdin
  • Email

ಸಾರಾಂಶ

ಬೀಡಿ ಕಾರ್ಮಿಕರಿಗೆ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಸಿಐಟಿಯು ಶುಕ್ರವಾರ ಮೂಡುಬಿದಿರೆ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ ಮೂಡುಬಿದಿರೆ ಡಿಪೋ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ರಾಜ್ಯ ಸರ್ಕಾರ ನಮಗೆ ಎರಡು ಸಾವಿರ ನೀಡಿರುವ ಬಗ್ಗೆ, ಉಚಿತ ಬಸ್‌ ಪ್ರಯಾಣ ಸಹಿತ ಇತರ ಬಿಟ್ಟಿ ಭಾಗ್ಯಗಳನ್ನು ನೀಡಿರುವುದನ್ನು ನಾವು ಲೋಕಸಭಾ ಚುನಾವಣೆಯಲ್ಲಿ ಮರೆತೆವು. ಆದರೆ ಇದೀಗ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದೆ ಆದ್ದರಿಂದ ನಮ್ಮ ಹೋರಾಟದ ಶಕ್ತಿ ಇನ್ನಷ್ಟು ಜಾಸ್ತಿಯಾಗಬೇಕಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ವಸಂತ ಆಚಾರಿ ಹೇಳಿದರು.

ಬೀಡಿ ಕಾರ್ಮಿಕರಿಗೆ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಸಿಐಟಿಯು ಶುಕ್ರವಾರ ಮೂಡುಬಿದಿರೆ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ ಮೂಡುಬಿದಿರೆ ಡಿಪೋ ಮುಂದೆ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.

ಬೀಡಿ ಕಾರ್ಮಿಕರಿಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ನೀಡಲು ಹಿಂದೇಟು ಹಾಕುತ್ತಿರುವುದನ್ನು ಆಕ್ಷೇಪಿಸಿದರು.

ಬೀಡಿ ಫೆಡರೇಶನ್ ರಾಜ್ಯಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಪ್ರತಿಭಟನಾ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಬೆಲೆ ಏರಿಕೆ ಜಾಸ್ತಿಯಾಗುತ್ತಿರುವುದರಿಂದ ಜನರಿಗೆ ಜೀವನ ನಡೆಸಲು ಕಷ್ಟ ಸಾಧ್ಯವಾಗಿದೆ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶ ಮಾಡಿ ಏರಿಕೆಯಾಗಿರುವ ತುಟ್ಟಿಭತ್ತೆಯನ್ನು ಬೀಡಿ ಮಾಲಕರು ನೀಡುವಂತೆ ಮಾಡಬೇಕೆಂದು ಆಗ್ರಹಿಸಿದರು.

ಸಿಐಟಿಯು ಮುಖಂಡರಾದ ಯಾದವಶೆಟ್ಟಿ, ರಮಣಿ, ಸೀತಾರಾಮ ಬೆರಿಂಜ, ಸುರೇಶ್ ಕುಮಾರ್, ರಾಧ, ಗಿರಿಜಾ, ಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.