ಸಾರಾಂಶ
ಬಂಡವಾಳ ಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ. ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಿದೆ.
ಕನ್ನಡಪ್ರಭ ವಾರ್ತೆ ಕೋಲಾರಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ಬಂಡವಾಳಶಾಹಿ ಪರವಾದ ನಿಲುವಿನ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ದೇಶಾದ್ಯಂತ ಎಲ್ಲಾ ತಾಲೂಕು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿದರು.ನಗರದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿ, ಬಂಡವಾಳ ಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ ಎಂದು ಕಿಡಿಕಾರಿದರು.ಬಂಡವಾಳಶಾಹಿ ವ್ಯವಸ್ಥೆ
ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಿರುವ ಕೇಂದ್ರ ಸರ್ಕಾರವು ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಟೀಕಿಸಿದರು.ಎಐಸಿಟಿಯುಸಿ ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಮಾತನಾಡಿ, ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಹೋರಾಟಕ್ಕೆ ಸಂಘ ಸಂಸ್ಥೆಗಳು ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.ಕಾರ್ಮಿಕ ವಿರೋಧಿ
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಾರ್ಮಿಕರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆದರೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಗಳು ಮಾಲೀಕನ ಪರವಾಗಿವೆ. ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕೆಂದರು.ಬೆಮೆಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಸಣ್ಣ ಹನುಮಂತಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಕೃಷ್ಣಮೂರ್ತಿ, ಇಂಟಕ್ ಮುಖಂಡರಾದ ಗಂಗಿರೆಡ್ಡಿ, ಎಂ ವಿಜಯಕೃಷ್ವ ಆರ್ ಪ್ರಭಾಕರ್ ಇದ್ದರು.