ಕೇಂದ್ರ ಸರ್ಕಾರವು ನಾಲ್ಕು ಶ್ರಮ ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಿ ರಾಜ್ಯ ಸರ್ಕಾರಗಳು ಜಾರಿಗೆ ತರುವಂತೆ ಒತ್ತಾಯಿಸುತ್ತಿರುವುದು ಖಂಡನೀಯ. ಇಡೀ ದೇಶದಾದ್ಯಂತ ಕಾರ್ಮಿಕರು, ಕಾರ್ಮಿಕ ಸಂಘಟನೆಗಳು ಇದನ್ನು ವಿರೋಧಿಸುತ್ತಿದ್ದರೂ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಹೊಸ ಶ್ರಮ ಸಂಹಿತೆಯನ್ನು ಜಾರಿಗೆ ತರಲು ಹೊರಟಿರುವುದು ದುರಂತ. ಕೇಂದ್ರ ಸರ್ಕಾರದ ಈ ನಿಲುವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಕ್ರೋಶ ವ್ಯಕ್ತಪಡಿಸಿದರು.

ಕುಂದಾಪುರ: ಕೇಂದ್ರ ಸರ್ಕಾರವು ನಾಲ್ಕು ಶ್ರಮ ಸಂಹಿತೆಗಳಿಗೆ ನಿಯಮಾವಳಿಗಳನ್ನು ರೂಪಿಸಿ ರಾಜ್ಯ ಸರ್ಕಾರಗಳು ಜಾರಿಗೆ ತರುವಂತೆ ಒತ್ತಾಯಿಸುತ್ತಿರುವುದು ಖಂಡನೀಯ. ಇಡೀ ದೇಶದಾದ್ಯಂತ ಕಾರ್ಮಿಕರು, ಕಾರ್ಮಿಕ ಸಂಘಟನೆಗಳು ಇದನ್ನು ವಿರೋಧಿಸುತ್ತಿದ್ದರೂ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಹೊಸ ಶ್ರಮ ಸಂಹಿತೆಯನ್ನು ಜಾರಿಗೆ ತರಲು ಹೊರಟಿರುವುದು ದುರಂತ. ಕೇಂದ್ರ ಸರ್ಕಾರದ ಈ ನಿಲುವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಕ್ರೋಶ ವ್ಯಕ್ತಪಡಿಸಿದರು.

ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಶ್ರಮ ಸಂಹಿತೆಯ ಅಧಿಸೂಚನೆಯ ಕರಡು ಪ್ರತಿ ದಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಸಿಐಟಿಯು ಮುಖಂಡರಾದ ಹೆಚ್. ನರಸಿಂಹ, ಮಹಾಬಲ ವಡೇರಹೋಬಳಿ, ಬಲ್ಕಿಸ್ ಬಾನು, ಸುರೇಂದ್ರ, ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡರಾದ ಶಶಿಕಾಂತ್, ಸುಧೀರ್, ರಾಜ ಬಿಟಿಆರ್, ರೆಹಮಾನ್, ಆಟೋ ಸಂಘಟನೆಯ ರಾಜು ದೇವಾಡಿಗ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.