ಸಾರಾಂಶ
ಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು.
ಮಂಡ್ಯ: ನಗರಸಭೆ ಕಾರ್ಯಾಲಯದಲ್ಲಿ ನಗರಸಭೆ ಆಡಳಿತ ಮಂಡಳಿ ವತಿಯಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪೌರ ಸನ್ಮಾನ ಮಾಡಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಮಂಡ್ಯ ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನುದಾನ ಕೊಡಿಸುವಲ್ಲಿ ಶ್ರಮಿಸುತ್ತೇನೆ ಎಂದರು. ಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು. ಅಭಿವೃದ್ಧಿಗೆ ಕ್ರೀಯಾಯೋಜನೆ ಸಿದ್ಧಪಡಿಸಿ ಎಂದು ಸಲಹೆ ನೀಡಿದರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಗರಸಭಾ ಅಧ್ಯಕ್ಷ ಪ್ರಕಾಶ್ ನಾಗೇಶ್, ಉಪಾಧ್ಯಕ್ಷ ಅರುಣ್‌ಕುಮಾರ್, ಸದಸ್ಯರಾದ ರಾಮಲಿಂಗಯ್ಯ, ಮೀನಾಕ್ಷಿ ಪುಟ್ಟಸ್ವಾಮಿ, ಮಂಜುಳಾ ಉದಯಶಂಕರ್, ವಸೀಂ, ಅಧಿಕಾರಿಗಳು, ಬಿಜೆಪಿ ಮುಖಂಡ ವಸಂತ್‌ಕುಮಾರ್, ಜೆಡಿಎಸ್ ಮುಖಂಡ ತಿಮ್ಮೇಗೌಡ ಮತ್ತಿತದ್ದರಿದ್ದರು.