ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ‘ಗೌರವ ನಮನ’ ಸಲ್ಲಿಸುವ ಕಾರ್ಯಕ್ರಮ ನಗರದ ಮಲ್ಲಿಕಟ್ಟೆ ಮಾರ್ಕೆಟ್ ಕಟ್ಟಡದಲ್ಲಿ ನಡೆಯಿತು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ‘ಗೌರವ ನಮನ’ ಸಲ್ಲಿಸುವ ಕಾರ್ಯಕ್ರಮ ನಗರದ ಮಲ್ಲಿಕಟ್ಟೆ ಮಾರ್ಕೆಟ್ ಕಟ್ಟಡದಲ್ಲಿ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡೆನಿಸ್ ಡಿಸಿಲ್ವ ಮಾತನಾಡಿ, ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಶ್ರಮವೇ ಆಧಾರ. ಅವರ ಸೇವೆಯನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ. ಗಾಂಧೀಜಿ ಪ್ರತಿಪಾದಿಸಿದ ಸ್ವಚ್ಛತೆ, ಸಮಾನತೆಯ ಮೌಲ್ಯಗಳನ್ನು ಕಾರ್ಯ ರೂಪಕ್ಕೆ ತರುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.ಮಾಜಿ ಶಾಸಕ ಜೆ.ಆರ್.ಲೋಬೊ ಮಾತನಾಡಿ, ಗಾಂಧೀಜಿ ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು. ಅವರು ಮಾಡಿದ ಸೇವೆಯಿಂದಲೇ ಪಾಲಿಕೆಗೆ ಉತ್ತಮ ಹೆಸರು ಬಂದಿದೆ. ಅವರಿಗೆ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್. ಅಪ್ಪಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಗಾಣಿಗ ಅಭಿವೃದ್ಧಿ ಅಧ್ಯಕ್ಷ ವಿಶ್ವಾಸ್ ದಾಸ್, ಪ್ರಮುಖರಾದ ವಸಂತ್ ಬೆರ್ನಡ್, ಅನಿಲ್ ಕುಡ್ಕೋರಿಗುಡ್ಡೆ, ಪ್ರಕಾಶ್ ಸಾಲ್ಯಾನ್, ಮೋಹನ್ ಕೋಟ್ಯಾನ್, ರಮಾನಂದ ಪೂಜಾರಿ, ಉದಯ ಕುಂದರ್, ಆಸೀಫ್ ಅಹ್ಮದ್, ಟಿ.ಕೆ.ಸುಧೀರ್, ಅಬ್ದುಲ್ ಶಫೀಕ್, ಶುಭೋದಯ ಆಳ್ವ ಮತ್ತಿತರರು ಇದ್ದರು.ಹಿರಿಯ ಪೌರ ಕಾರ್ಮಿಕರಾದ ಕಮಲ ಮತ್ತು ಸೇಸಪ್ಪ ಅವರನ್ನು ಸನ್ಮಾನಿಸಲಾಯಿತು.