ಸಾರಾಂಶ
ಪೌರ ಕಾರ್ಮಿಕರು ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ವಹಿಸದೆ ಊರಿನ ಸ್ವಚ್ಛತೆಗೆ ಮಹತ್ವ ಕೊಡುತ್ತಾರೆ. ವೇತನ ಕಡಿಮೆ ಕೆಲಸ ಹೆಚ್ಚು ಎನ್ನುವ ಸ್ಥಿತಿಯಲ್ಲಿ ಪೌರ ಕಾರ್ಮಿಕರು ಇದ್ದಾರೆ, ಪೌರ ಕಾರ್ಮಿಕರು ಸೂರ್ಯೋದಕ್ಕಿಂತ ಮುಂಚೆಯೇ ಊರಿನ ಸ್ವಚ್ಛತೆಗೆ ಮುಂದಾಗುತ್ತಾರೆ. ಪಟ್ಟಣದ ಸೌಂದರ್ಯ ಹೆಚ್ಚಿಸುವಲ್ಲಿ, ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದ್ದು, ಅವರನ್ನು ಗೌರವಿಸುವುದು ಸರ್ಕಾರ ಮತ್ತು ಸಾರ್ವಜನಿಕರ ಕೆಲಸವಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಾಹೀರ ಬೇಗಂ ತಿಳಿಸಿದರು.
ಕನ್ನಡಪ್ರಭ ವಾರ್ತೆ ಆಲೂರು
ಪೌರ ಕಾರ್ಮಿಕರು ಸ್ವಚ್ಛತೆಯ ಸೈನಿಕರಿದ್ದಂತೆ. ಪಟ್ಟಣದ ಸೌಂದರ್ಯ ಹೆಚ್ಚಿಸುವಲ್ಲಿ, ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದ್ದು, ಅವರನ್ನು ಗೌರವಿಸುವುದು ಸರ್ಕಾರ ಮತ್ತು ಸಾರ್ವಜನಿಕರ ಕೆಲಸವಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಾಹೀರ ಬೇಗಂ ತಿಳಿಸಿದರು.ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ವೈಯಕ್ತಿಕ ಆರೋಗ್ಯದ ಬಗ್ಗೆ ನಿಗಾ ವಹಿಸದೆ ಊರಿನ ಸ್ವಚ್ಛತೆಗೆ ಮಹತ್ವ ಕೊಡುತ್ತಾರೆ. ವೇತನ ಕಡಿಮೆ ಕೆಲಸ ಹೆಚ್ಚು ಎನ್ನುವ ಸ್ಥಿತಿಯಲ್ಲಿ ಪೌರ ಕಾರ್ಮಿಕರು ಇದ್ದಾರೆ, ಪೌರ ಕಾರ್ಮಿಕರು ಸೂರ್ಯೋದಕ್ಕಿಂತ ಮುಂಚೆಯೇ ಊರಿನ ಸ್ವಚ್ಛತೆಗೆ ಮುಂದಾಗುತ್ತಾರೆ. ಪೌರ ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಮುಖ್ಯ ಅಧಿಕಾರಿ ಸ್ಟೀಫನ್ ಪ್ರಕಾಶ್ ಮಾತನಾಡಿ, ಪೌರ ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ, ವಿಮೆ ಸೌಲಭ್ಯ ಸೇರಿದಂತೆ ಅನೇಕ ಸರ್ಕಾರಿ ಸೌಲಭ್ಯಗಳನ್ನು ಕಾನೂನು ಚೌಕಟ್ಟಿನಲ್ಲಿ ಕಲ್ಪಿಸಲಾಗುತ್ತಿದೆ. ಅದನ್ನು ಎಲ್ಲರೂ ಬಳಸಬೇಕು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಮೂಲ್ಯವಾಗಿದೆ. ಪೌರ ಕಾರ್ಮಿಕರು ಕೆಲಸದ ವೇಳೆ ಸುರಕ್ಷತಾ ಪರಿಕರಗಳನ್ನು ಧರಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಹರೀಶ್, ಧರ್ಮ, ಸಂತೋಷ್, ತೌಫಿಕ್ ಅಹಮದ್, ಅಬ್ದುಲ್ ಖುದ್ದೂಸ್, ಬಿ.ಪಿ ರಾಣಿ, ವೇದಾ ಸುರೇಶ್, ಪಟ್ಟಣ ಪಂಚಾಯಿತಿ ಪ್ರಭಾರ ಆರೋಗ್ಯಾಧಿಕಾರಿ ಜ್ಯೋತಿ, ಸಿಬ್ಬಂದಿಯಾದ ಮಂಜುನಾಥ್, ಗಣೇಶ್, ರಾಜಲಕ್ಷ್ಮಿ, ಜಯಲಕ್ಷ್ಮಿ ಸೇರಿದಂತೆ ಮುಂತಾದವರು.