ಪೌರಕಾರ್ಮಿಕರು ಜನರ ಆರೋಗ್ಯ ರಕ್ಷಕರು

| Published : Jul 20 2025, 01:15 AM IST

ಸಾರಾಂಶ

ಪೌರ ಕಾರ್ಮಿಕರು ಸ್ವಚ್ಛತೆ ಜತೆಗೆ ಜನರ ಆರೋಗ್ಯ ಕಾಪಾಡುವ ರಕ್ಷಕರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ, ಮಳೆ-ಚಳಿ ಲೆಕ್ಕಿಸದೆ ತಮ್ಮ ಸೇವೆ ಸಲ್ಲಿಸುತ್ತಾರೆ. ಪೌರ ಕಾರ್ಮಿಕರು ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ತಮ್ಮದೆಯಾದ ಕೊಡುಗೆ ನೀಡಿದ್ದಾರೆ.

ಯಲಬುರ್ಗಾ:

ತಮ್ಮ ಆರೋಗ್ಯ ಲೆಕ್ಕಿಸದೆ ನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರ ಕಾರ್ಮಿಕರ ಶ್ರಮ ಶ್ಲಾಘನೀಯ ಎಂದು ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಹೇಳಿದರು.

ಪಟ್ಟಣ ಪಂಚಾಯಿತಿಯಿಂದ ಗುರುವಾರ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರು ಸ್ವಚ್ಛತೆ ಜತೆಗೆ ಜನರ ಆರೋಗ್ಯ ಕಾಪಾಡುವ ರಕ್ಷಕರಾಗಿದ್ದಾರೆ. ಹಗಲು-ರಾತ್ರಿ ಎನ್ನದೆ, ಮಳೆ-ಚಳಿ ಲೆಕ್ಕಿಸದೆ ತಮ್ಮ ಸೇವೆ ಸಲ್ಲಿಸುತ್ತಾರೆ. ಪೌರ ಕಾರ್ಮಿಕರು ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ತಮ್ಮದೆಯಾದ ಕೊಡುಗೆ ನೀಡಿದ್ದಾರೆ ಎಂದರು.

ಮುಖ್ಯಾಧಿಕಾರಿ ನಾಗೇಶ ಮಾತನಾಡಿ, ಪಟ್ಟಣ ಪಂಚಾಯಿತಿಯಿಂದ ಪೌರ ಕಾರ್ಮಿಕರಿಗೆ ಜಾರ್ಕಿನ್, ಶರ್ಟ್, ಪ್ಯಾಂಟ್ ಹಾಗೂ ಇನ್ನಿತರ ವಸ್ತು ನೀಡಲಾಗುತ್ತಿದೆ. ಪಟ್ಟಣವನ್ನು ಸ್ವಚ್ಛ ಹಾಗೂ ಸುಂದರವಾಗಿ ಕಾಣಲು ಅವರ ಶ್ರಮ ಪ್ರಮುಖವಾಗಿದೆ ಎಂದು ಹೇಳಿದರು.

ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಶಿಧರ ಸಕ್ರಿ ಮುಖಾಂತರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕ ವಿತರಿಸಲಾಯಿತು. ಪಪಂ ಸದಸ್ಯರಾದ ಅಮರೇಶ ಹುಬ್ಬಳ್ಳಿ, ವಸಂತಕುಮಾರ ಭಾವಿಮನಿ, ರೇವಣಪ್ಪ ಹಿರೇಕುರುಬರ, ಅಶೋಕ ಅರಕೇರಿ, ಹನುಮಂತ ಭಜಂತ್ರಿ, ಶರಣಮ್ಮ ಪೂಜಾರ ಸೇರಿದಂತೆ ಇತರರು ಇದ್ದರು.