ಸಾರಾಂಶ
ಪೌರ ಕಾರ್ಮಿಕರಿಗೆ ವಿಶೇಷವಾದ ಗೌರವ ಇದ್ದು, ಕೆಲಸದಲ್ಲಿ ಕೀಳರಿಮೆ ಇರಬಾರದು, ಗಡಿಯಲ್ಲಿ ಸೈನಿಕರಿಗೆ ಗೌರವ ಸಲ್ಲಿಸುವಂತೆ ನಗರದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡಲಾಗುತ್ತದೆ. ನೀವು ಮಾಡುವ ಕೆಲಸಕ್ಕೆ ಗೌರವ ನೀಡಿದರೆ ಆ ಕೆಲಸ ನಿಮಗೆ ಗೌರವ ನೀಡುತ್ತದೆ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ದೇಶದ ಜನರು ಬೆಚ್ಚಗೆ ಮಲಗಿರುವ ಹೊತ್ತಿನಲ್ಲಿ ಕಸವನ್ನು ಹೆಕ್ಕುವ ಪೌರಕಾರ್ಮಿಕರು ಜನರು ಕಣ್ಣುಬಿಡುವ ಮುನ್ನ ತಮ್ಮ ಕೆಲಸ ಮುಗಿಸುವ ತರಾತುರಿಯಲ್ಲಿರುತ್ತಾರೆ. ಅಂತಹ ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಸುವ ದೇವತೆಗಳು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.ನಗರದ ನಗರಸಭಾ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ನಗರದದ ಜೀವನಾಡಿಗಳಾಗಿದ್ದಾರೆ, ಅಂತಹ ಸೇವಾ ನಿರತ ಪೌರ ಕಾರ್ಮಿಕರ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸುತ್ತಾ ಬರುತ್ತಿರುವದು ಸ್ವಾಗತಾರ್ಹ ಎಂದರು.ನಗರ ಸಭೆ ಅಧ್ಯಕ್ಷ ಎ.ಗಜೇಂದ್ರ ಮಾತನಾಡಿ,ಪರಿಸರ ಸ್ವಚ್ಛತೆಯ ಜೊತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆಯಾಗಿದ್ದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು ಎಂದರು.ಮಾಡುವ ಕೆಲಸ ಗೌರವಿಸಿ
ನಗರಸಭೆ ಉಪಾಧ್ಯಕ್ಷ ಜೆ,ನಾಗರಾಜು ಮಾತನಾಡಿ, ಪೌರ ಕಾರ್ಮಿಕರಿಗೆ ವಿಶೇಷವಾದ ಗೌರವ ಇದ್ದು, ಕೆಲಸದಲ್ಲಿ ಕೀಳರಿಮೆ ಇರಬಾರದು, ಗಡಿಯಲ್ಲಿ ಸೈನಿಕರಿಗೆ ಗೌರವ ಸಲ್ಲಿಸುವಂತೆ ನಗರದಲ್ಲಿ ಪೌರ ಕಾರ್ಮಿಕರಿಗೆ ಗೌರವ ನೀಡಲಾಗುತ್ತದೆ. ನೀವು ಮಾಡುವ ಕೆಲಸಕ್ಕೆ ಗೌರವ ನೀಡಿದರೆ ಆ ಕೆಲಸ ನಿಮಗೆ ಗೌರವ ನೀಡುತ್ತದೆ ಎಂದರು.ಕಾರ್ಯಕ್ರಮದಲ್ಲಿ ಉತ್ತಮ ಸೇವೆ ನೀಡುತ್ತಿರುವ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ನಗರಸಭೆಯ ಪ್ರಭಾರಿ ಪೌರಾಯುಕ್ತ ಹಾಗೂ ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್,ನಗರಾಭಿವೃದ್ದಿ ಕೋಶಾಧೀಕಾರಿ ಮಾಧವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಶೇಷಾದ್ರಿ, ಪರಿಸರ ಅಭಿಯಂತರ ಉಮಾಶಂಕರ್, ಜಿಲ್ಲಾ ಜಾಗೃತಿ ಸಮಿತಿಯ ಜೀವಿಕಾ ರತ್ನಮ್ಮ, ಸಫಾಯಿ ಕರ್ಮಚಾರಿ ಯೋಗ ಕ್ಷೇಮ ಸಮಿತಿ ನಾರಾಯಣಸ್ವಾಮಿ, ನಗರಸಭೆ ಸದಸ್ಯರಾದ ನಿರ್ಮಲಪ್ರಭು, ವೀಣಾರಾಮು, ಅಫ್ಜಲ್ ಪಾಷ, ಪೌರಕಾರ್ಮಿಕರು ಇದ್ದರು.