ಚಿಕ್ಕಮಗಳೂರುಯುಜಿಡಿ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ಪೌರಕಾರ್ಮಿಕರು ಒಳಚರಂಡಿ ಮ್ಯಾನ್‌ಹೋಲ್‌ಗೆ ಇಳಿಯಬಾರದು. ಕರ್ತವ್ಯದ ವೇಳೆ ಕಡ್ಡಾಯವಾಗಿ ಸುರಕ್ಷತಾ ಸಾಧನಗಳನ್ನು ಬಳಸಬೇಕು ಎಂದು ನಗರಸಭೆ ಆಯುಕ್ತ ಬಸವರಾಜ್ ಸೂಚಿಸಿದರು.

ಮ್ಯಾನ್ಯು ವಲ್ ಸ್ಕ್ಯಾವೆಂಜಿಂಗ್‌ಗೆ ನಿಯಮಗಳ ಜಾಗೃತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಯುಜಿಡಿ ಹಾಗೂ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ಪೌರಕಾರ್ಮಿಕರು ಒಳಚರಂಡಿ ಮ್ಯಾನ್‌ಹೋಲ್‌ಗೆ ಇಳಿಯಬಾರದು. ಕರ್ತವ್ಯದ ವೇಳೆ ಕಡ್ಡಾಯವಾಗಿ ಸುರಕ್ಷತಾ ಸಾಧನಗಳನ್ನು ಬಳಸಬೇಕು ಎಂದು ನಗರಸಭೆ ಆಯುಕ್ತ ಬಸವರಾಜ್ ಸೂಚಿಸಿದರು.ನಗರಸಭೆ ಸಭಾಂಗಣದಲ್ಲಿ ಪೌರಕಾರ್ಮಿಕರು ಹಾಗೂ ಮನೆ-ಮನೆ ಕಸ ಸಂಗ್ರಹಿಸುವ ಸಿಬ್ಬಂದಿಗೆ ಯುಜಿಡಿ ಮತ್ತು ಮ್ಯಾನ್ಯು ವಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಸುರಕ್ಷತಾ ನಿಯಮಗಳ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿ ಸುರಕ್ಷತಾ ಕಿಟ್‌ಗಳನ್ನು ನಿರ್ಲಕ್ಷಿಸಿ ಕೆಲಸ ಮಾಡುವುದರಿಂದ ಜೀವಕ್ಕೆ ಅಪಾಯ ಉಂಟಾಗ ಬಹುದು. ಒಂದು ದಿನದ ಕೆಲಸಕ್ಕಾಗಿ ಆರೋಗ್ಯ ಮತ್ತು ಜೀವವನ್ನು ಅಪಾಯಕ್ಕೆ ತಳ್ಳಿಕೊಳ್ಳಬಾರದು. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.ಯುಜಿಡಿ ನಿರ್ವಹಣೆಯಲ್ಲಿ ಮಾನವ ಶ್ರಮದ ಬದಲಿಗೆ ಆಧುನಿಕ ಯಂತ್ರೋಪಕರಣ ಹಾಗೂ ರೋಬೋಟಿಕ್ ವ್ಯವಸ್ಥೆ ಬಳಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ಹಣಕಾಸು ವ್ಯವಸ್ಥೆಯಲ್ಲಿ ಅವಕಾಶ ದೊರೆತರೆ ರೋಬೋಟಿಕ್ ಯಂತ್ರ ಖರೀದಿಸುವ ಸಾಧ್ಯತೆಯನ್ನು ಪರಿಶೀಲಿಸಲಾಗುವುದು ಎಂದರು.ಮನೆ-ಮನೆ ಕಸ ಸಂಗ್ರಹಣೆ ವ್ಯವಸ್ಥಿತವಾಗಿ ನಡೆಯಬೇಕು. ನಗರದಲ್ಲಿ ಎಲ್ಲೆಂದರಲ್ಲಿ ಕಸ ಬೀಳದಂತೆ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರ ಒದಗಿಸಿರುವ ವಾಹನಗಳನ್ನು ಸಮರ್ಪಕವಾಗಿ ನಿರ್ವಹಿಸುವ ಜತೆಗೆ ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಸೂಚಿಸಿದರು.ಜನರೋಬಟಿಕ್ಸ್ ಕಂಪನಿ ಕೋ-ಆರ್ಡಿನೇಟರ್ ಮಾನಸಿ, ಆಕರ್ಶ್, ಪರಿಸರ ಅಭಿಯಂತರ ವೆಂಕಟೇಶ್, ಆರೋಗ್ಯ ನಿರೀಕ್ಷಕರಾದ ರಂಗಪ್ಪ, ನಾಗಪ್ಪ, ವೆಂಕಟೇಶ್, ಈಶ್ವರ್, ಪೌರಕಾರ್ಮಿಕರ ಅಧ್ಯಕ್ಷ ಅಣ್ಣಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.