ಸಾರಾಂಶ
ಶಿರಾ: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರು ತಮ್ಮ ವೈಯಕ್ತಿಕ ಆರೋಗ್ಯದ ಕಡೆಯೂ ಗಮನ ನೀಡಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್ ಹೇಳಿದರು.
ಶಿರಾ: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರು ತಮ್ಮ ವೈಯಕ್ತಿಕ ಆರೋಗ್ಯದ ಕಡೆಯೂ ಗಮನ ನೀಡಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್ ಹೇಳಿದರು. ಶನಿವಾರ ನಗರಸಭೆಯ ಆವರಣದಲ್ಲಿ ಪೌರಕಾರ್ಮಿಕರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಿರುವ ಕಾರಣದಿಂದ ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಪೌರಕಾರ್ಮಿಕರು ಆರೋಗ್ಯದಿಂದಿರುವುದು ಬಹಳ ಮುಖ್ಯ. ಆದ್ದರಿಂದಲೇ ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ ಎಂದು ತಿಳಿಸಿದರು. ನಗರಸಭೆ ಉಪಾಧ್ಯಕ್ಷ ಲಕ್ಷ್ಮೀಕಾಂತ್ ಮಾತನಾಡಿ, ಪೌರಕಾರ್ಮಿಕರ ಪ್ರತಿ ದಿನ ಬೆಳಗಿನ ಜಾವ 4 ಗಂಟೆಯಿಂದಲೇ ನಗರವನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ. ಎಲ್ಲರೂ ನೆಮ್ಮದಿಯ ನಿದ್ದೆ ಮಾಡುವಾಗಿ ಸಮಯದಲ್ಲಿ ಪೌರಕಾರ್ಮಿಕರು ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುತ್ತಾರೆ. ಪೌರಕಾರ್ಮಿಕರ ಕೆಲಸ ಬೇರೆ ಯಾರೂ ಮಾಡಲು ಸಾಧ್ಯವಿಲ್ಲ. ಅವರ ಸೇವೆಯನ್ನು ನಾವೆಲ್ಲರೂ ಗೌರವಿಸಬೇಕು ಎಂದರು.ಪೌರಾಯುಕ್ತ ರುದ್ರೇಶ್ ಮಾತನಾಡಿ, ಪೌರಕಾರ್ಮಿಕರು ನಗರದ ಸೈನಿಕರಿದ್ದಂತೆ. ಸೈನಿಕರಿದ್ದರೆ ದೇಶ ಸುರಕ್ಷತೆಯಿಂದ ಇರುತ್ತದೆ. ಅದೇ ರೀತಿ ಪೌರಕಾರ್ಮಿಕರು ಆರೋಗ್ಯವಾಗಿದ್ದರೆ ಇಡೀ ನಗರ ಆರೋಗ್ಯವಾಗಿರುತ್ತದೆ. ಪೌರಕಾರ್ಮಿಕರು ಆರೋಗ್ಯವಂತರಾಗಿದ್ದರೆ ನಗರದ ಸ್ವಚ್ಛತೆ ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ ಎಂದು ನುಡಿದರು. ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶಂಕರಪ್ಪ, ನಗರಸಭಾ ಸದಸ್ಯರಾದ ಕೃಷ್ಣಪ್ಪ, ಅಜಯ್‌ಕುಮಾರ್, ಮಹೇಶ್, ಮುಖಂಡರಾದ ಮಜರ್‌ಸಾಬ್, ಪರಿಸರ ಅಭಿಯಂತರೆ ಪಲ್ಲವಿ ಸೇರಿದಂತೆ ಮತ್ತಿತರರಿದ್ದರು.