ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನ.7ರಂದು ತಾಲೂಕಿನ ಕುಮ್ಮೂರ ಗ್ರಾಮದಲ್ಲಿ ಕಾಗಿನೆಲೆ ಹೋಬಳಿ ಮಟ್ಟದ ''ಪ್ರಜಾಸೇವೆ ಆಂದೋಲನ'' ಸಭೆ ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಸಾರಿಕಾ ಸಿಂಗನಮಕ್ಕಿ ಹೇಳಿದರು.
ಬ್ಯಾಡಗಿ:ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ನ.7ರಂದು ತಾಲೂಕಿನ ಕುಮ್ಮೂರ ಗ್ರಾಮದಲ್ಲಿ ಕಾಗಿನೆಲೆ ಹೋಬಳಿ ಮಟ್ಟದ ''''''''ಪ್ರಜಾಸೇವೆ ಆಂದೋಲನ'''''''' ಸಭೆ ಆಯೋಜಿಸಲಾಗಿದೆ ಎಂದು ತಹಸೀಲ್ದಾರ್ ಸಾರಿಕಾ ಸಿಂಗನಮಕ್ಕಿ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶನಿವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸ್ಥಳದಲ್ಲಿಯೆ ಜನರ ಸಮಸ್ಯೆಗಳಿಗೆ ಸ್ಪಂದನೆ:ಪ್ರಜಾಸೇವೆ ಆಂದೋಲನದ ಮುಖ್ಯ ಉದ್ದೇಶ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳುವಂತೆ ಮಾಡುವುದು. ವಿವಿಧ ಇಲಾಖೆಗಳ ಸೇವೆ ಪಡೆಯುವಲ್ಲಿ ಸಾರ್ವಜನಿಕರಿಗೆ ಎದುರಾಗುವ ತೊಂದರೆಗಳು, ವಿಳಂಬ ಹಾಗೂ ಕುಂದು ಕೊರತೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲು ಅವಕಾಶವಿದೆ ಎಂದರು.
ಎಲ್ಲ ಇಲಾಖೆಗಳು ಒಂದೇ ವೇದಿಕೆಯಲ್ಲಿ:ಕಂದಾಯ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ ಮತ್ತು ನಾಗರಿಕ ಸರಬರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದರಿಂದ ಒಂದೇ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗ ಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.ಜನರ ಬಳಿಗೆ ಆಡಳಿತ:ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜತೆಗೆ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿಯೂ ಸಭೆ ಮಹತ್ವದ್ದಾಗಿದೆ. ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ, ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ಪ್ರಯತ್ನ ಇದಾಗಿದೆ ಎಂದರು.
ದಾಖಲೆಗೊಂದಿಗೆ ಬನ್ನಿ:ತಾಲೂಕಿನ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ ಸಭೆಗೆ ಹಾಜರಾಗಿ ಅಧಿಕಾರಿಗಳ ಗಮನಕ್ಕೆ ತರಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಆಡಳಿತದ ಪ್ರಮುಖ ಜವಾಬ್ದಾರಿಯಾಗಿದ್ದು, ಸಭೆಯಲ್ಲಿ ಸ್ವೀಕರಿಸಲಾಗುವ ಅರ್ಜಿಗಳು ಹಾಗೂ ಮನವಿಗಳ ಕುರಿತು ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳಲಿವೆ. ಆದ್ದರಿಂದ ಕಾಗಿನೆಲೆ ಹೋಬಳಿಯ ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಪೋಟೊ-07ಬಿವೈಡಿ2-ಬ್ಯಾಡಗಿ-ತಹಸೀಲ್ದಾರ್ ಸಾರಿಕಾ ಸಿಂಗನಮಕ್ಕಿ