ಸಾರಾಂಶ
ಇಲ್ಲಿನ ನಗರಸಭೆ ಮುಂಭಾಗದಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದ ಹೊರಗುತ್ತಿಗೆ ಪೌರಕಾರ್ಮಿಕರು ಹೋರಾಟ ಪಾವಾಸ್ ಪಡೆದು ಫೆ.೧೫ರಂದಲೇ ಎಂದಿನಂತೆ ಕೆಲಸಕ್ಕೆ ಹಾಜರಾಗುವರು ಎಂದು ಹೊರಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್. ಶ್ರೀನಿವಾಸ್ ತಿಳಿಸಿದ್ಧಾರೆ.
ಕನ್ನಡಪ್ರಭ ವಾರ್ತೆ, ಚಳ್ಳಕೆರೆ
ಇಲ್ಲಿನ ನಗರಸಭೆ ಮುಂಭಾಗದಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದ ಹೊರಗುತ್ತಿಗೆ ಪೌರಕಾರ್ಮಿಕರು ಹೋರಾಟ ಪಾವಾಸ್ ಪಡೆದು ಫೆ.೧೫ರಂದಲೇ ಎಂದಿನಂತೆ ಕೆಲಸಕ್ಕೆ ಹಾಜರಾಗುವರು ಎಂದು ಹೊರಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್. ಶ್ರೀನಿವಾಸ್ ತಿಳಿಸಿದ್ಧಾರೆ.ಪತ್ರಿಕಾ ಹೇಳಿಕೆ ನೀಡಿ, ಫೆ.೧೩ ಮತ್ತು ೧೪ರಂದು ಮುಷ್ಕರ ನಡೆಸಿದ್ದೇವೆ. ಫೆ.೧೫ರಂದು ಸಂಘಟನೆ ಪರವಾಗಿ ಮೂವರು ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದು, ಉಳಿದವರು ಕೆಲಸಕ್ಕೆ ಹಾಜರಾಗಲಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ವೇತನ ಸೇರಿ ಇನ್ನಿತರ ಸೌಲಭ್ಯಕ್ಕೆ ಬೇಡಿಕೆ ಇಟ್ಟು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಎರಡು ದಿನಗಳಿಂದ ಸೇವೆ ನಿರ್ವಹಿಸದ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತರು ಸಂಬಂಧಪಟ್ಟ ಸರ್ಕಾರೇತರ ಸಂಸ್ಥೆಗಳಿಗೆ ನೋಟಿಸ್ ನೀಡಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ಅವರೇ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಬೇಕೆಂದು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಪೌರಕಾರ್ಮಿಕರು ಮುಷ್ಕರ ಮೊಟಕುಗೊಳಿಸಿ ಸೇವೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.;Resize=(128,128))
;Resize=(128,128))
;Resize=(128,128))
;Resize=(128,128))