ಸಾರಾಂಶ
- ಮೃತ್ಯುಂಜಯ ಪ್ರ.ದ. ಕಾಲೇಜಿನ ವಾರ್ಷಿಕೋತ್ಸವದಲ್ಲಿ ಡಾ. ವೆಂಕಟೇಶ್ ಬಾಬು - - - ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಯುವಪೀಳಿಗೆ ಗುರಿಯಲ್ಲಿ ಸ್ಪಷ್ಟತೆ ಹಾಗೂ ಅದನ್ನು ಸಾಧಿಸುವ ಛಲ ಹೊಂದಿರಬೇಕು. ಬದಲಿಗೆ ಗುರಿ ಸಾಧನೆಯಲ್ಲಿ ಹೊಂದಾಣಿಕೆ ಮಾಡಿಕೊಂಡು ಇದ್ದುದ್ದರಲಿಯೇ ಸಾಕು ಎನ್ನುವ ರಾಜಿ ಮನೋಭಾವನೆ ಹೊಂದಿರಬಾರದು ಎಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ವೆಂಕಟೇಶ್ ಬಾಬು ಎಸ್. ಹೇಳಿದರು. ಪಟ್ಟಣದ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2023- 2024ನೇ ಸಾಲಿನ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ಪ್ರತಿ ವಿದ್ಯಾರ್ಥಿಯೂ ಭವಿಷ್ಯದ ಉಜ್ವಲ ಕನಸ್ಸನ್ನು ಹೊಂದಿರಬೇಕು. ಈ ಕನಸನ್ನು ಸಾಕಾರಗೊಳಿಸಲು ಶ್ರದ್ಧೆ ಮತ್ತು ಶ್ರಮದಿಂದ ಛಲಬಿಡದೇ ಸಾಧಿಸಬೇಕು. ಮಹಾಪುರುಷರಾದ ಬುದ್ದ, ಬಸವ, ಗಾಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಅವರಂಥ ಹಲವಾರು ಮಹಾನ್ ಸಾಧಕರ ಹೆಸರುಗಳು ಸಮಾಜದಲ್ಲಿ ಸ್ಥಿರಸ್ಥಾಯಿಯಾಗಿವೆ. ಇದಕ್ಕೆ ಕಾರಣ ಅವರ ನಿಸ್ವಾರ್ಥ, ಸಮಾಜಮುಖಿ ಚಿಂತನೆಗಳು ಎಂದರು.
ಮುಖಂಡ ಹಾಗೂ ರೈಸ್ ಮಿಲ್ ಮಾಲೀಕ ಎಚ್.ಎ. ಉಮಾಪತಿ ಮಾತನಾಡಿ, ತಮ್ಮ ತಂದೆ-ತಾಯಿ ಹೆಸರಿನಲ್ಲಿ ₹1 ಲಕ್ಷ ದತ್ತಿ ನಿಧಿಯನ್ನು ಸ್ಥಾಪಿಸಿ, ಬಡ್ಡಿ ಹಣದಲ್ಲಿ ಪ್ರತಿವರ್ಷ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿ ಘೋಷಿಸಿದರು.ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ದೊಡ್ಡಗೌಡರ ಅಧ್ಯಕ್ಷತೆ ವಹಿಸಿ, ಕಾಲೇಜಿನ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಸಾಧನೆಗಳ ಕುರಿತು ಮಾತನಾಡಿದರು.
ಅತಿಥಿಗಳಾಗಿ ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಸ್. ಗಿರೀಶ್, ಶ್ರೀ ಮಠದ ವಿದ್ಯಾಪೀಠದ ನಿರ್ದೇಶಕರಾದ ಎಂ.ಪಿ.ಎಂ. ಚನ್ನಬಸಯ್ಯ ಭಾಗವಹಿಸಿದ್ದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ನರಗಟ್ಟಿ ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಕನ್ನಡ ಉಪನ್ಯಾಸಕ, ಐಕ್ಯೂಎಸಿ ಮತ್ತು ಸಾಂಸ್ಕೃತಿಕ ಸಂಚಾಲಕರಾದ ಕೆ.ನಾಗೇಶ್ ಅವರು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.- - -
ಬಾಕ್ಸ್ * ಜೀವನದಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ: ಶ್ರೀ ದಿವ್ಯ ಸಾನಿಧ್ಯ ವಹಿಸಿದ್ದ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ. ಪೋಷಕರು, ಶಿಕ್ಷಕರು, ಗುರುಗಳಿಂದ ಪಡೆಯುವ ಸಂಸ್ಕಾರಗಳೂ ಭವಿಷ್ಯದಲ್ಲಿ ದೇಶ ಮತ್ತು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಹಕಾರಿಯಾಗುತ್ತವೆ. ಪಾಠ ಪ್ರವಚಗಳ ಜೊತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕೂಡ ಸಕ್ರಿಯವಾಗಿ ಭಾಗವಹಿಸಬೇಕು. ಇದು ವ್ಯಕ್ತಿತ್ವ ಬೆಳವಣಿಗೆಗೆ ನೆರವಾಗುತ್ತದೆ ಎಂದು ತಿಳಿಸಿದರು.- - - -15ಎಚ್.ಎಲ್.ಐ1.:
ಹೊನ್ನಾಳಿ ಪಟ್ಟಣದ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ ಉದ್ಘಾಟಿಸಿದರು.