ಭಾಗಮಂಡಲ: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಶಂಕಿತ ಬೇಟೆಗಾರರ ಶೂಟ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರ ಬಳಿ ಕೋವಿ ಮತ್ತು 2 ಚೀಲ ಮಾಂಸ ಪತ್ತೆಯಾಗಿದೆ. ಓರ್ವ ಪರಾರಿಯಾಗಿದ್ದಾನೆ. ತನಿಖೆ ನಂತರ ಸ್ಪಷ್ಟತೆ ದೊರಕಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಈಗ ಕಣ್ ಬಿಡುತ್ತಿದ್ದೇನೆ: ಜಿಲ್ಲೆಯಲ್ಲಿ ಮಳೆ ಹಾನಿ ಬಗ್ಗೆ ವರದಿ ಸಂಗ್ರಹಿಸಿ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ರಾಜ್ಯದ ಜಲಾಶಯಗಳು ಭರ್ತಿಯಾಗಲಿ ಎಂದು ಕೊಡಗಿನ ದೇವರಾದ ಭಗಂಡೇಶ್ವರನಲ್ಲಿ ಪ್ರಾರ್ಥಿಸಿದ್ದೇನೆ. ಈಗಷ್ಟೇ ಮುಖ್ಯಮಂತ್ರಿಯಾಗಿ ಕಣ್ ಬಿಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕೊಡಗಿಗೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಗಮನ ನೀಡುತ್ತೇವೆ ಎಂದರು.ಯಾರನ್ನು ನೋಯಿಸಲ್ಲ: ಆರ್‌ಎಸ್‌ಎಸ್ ನೋಂದಣಿ ಸಂಬಂಧಿಸಿ ಆರ್‌ಎಸ್‌ಎಸ್ ಮುಖಂಡ ಸಂತೋಷ್ ಜಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಯಾರನ್ನೂ ಮನನೋಯಿಸುವುದಕ್ಕಾಗಿ ಈ ಕಾನೂನು ಮಾಡುತ್ತಿಲ್ಲ. ಕೋರ್ಟ್ ಆದೇಶಗಳನ್ನು ಪಾಲಿಸಿಯೇ ಕಾನೂನು ರೂಪಿಸುತ್ತಿದ್ದೇವೆ. ಕೋರ್ಟಿನ ಕಾನೂನಿಗೆ ಗೌರವ ಕೊಡಬೇಕಲ್ಲವೇ? ಎಂದು ಪ್ರಶ್ನಿಸಿದರು.
ನಾವು ಭಾರತ್ ಜೋಡೋ ಕಾರ್ಯಕ್ರಮ ಮಾಡುವಾಗ ಫ್ರೀಡಂ ಪಾರ್ಕ್‌ನಿಂದ ರ್‍ಯಾಲಿ ಮಾಡಲು ಅವಕಾಶವಿರಲಿಲ್ಲ. ಆಗ ಕೋರ್ಟ್‌ನಿಂದಲೇ ಅನುಮತಿ ಪಡೆದಿದ್ದೆವು. ನಮ್ಮದೇ ಸರ್ಕಾರ ಇದ್ದರೂ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳಲಿಲ್ಲ. ಸಂತೋಷ್ ಜಿ ಅವರು ಹಿರಿಯರು. ಅವರ ಮಾತಿಗೂ ಗೌರವ ಕೊಡುತ್ತೇವೆ. ಆದರೆ ಮೊದಲಿನಿಂದಲೂ ಕಾನೂನಿಗೂ ಗೌರವ ಕೊಡಬೇಕು ಎಂದರು. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿದಂತೆ ಯಾವುದೇ ಸಂಘಟನೆಯೂ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.ತನಿಖೆ ಬಳಿಕ ಶೂಟೌಟ್ ಪ್ರಕರಣಕ್ಕೆ ಸ್ಪಷ್ಟತೆ: ಡಿಕೆಶಿ
ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಶಂಕಿತ ಬೇಟೆಗಾರರ ಶೂಟ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರ ಬಳಿ ಕೋವಿ ಮತ್ತು 2 ಚೀಲ ಮಾಂಸ ಪತ್ತೆಯಾಗಿದೆ. ಓರ್ವ ಪರಾರಿಯಾಗಿದ್ದಾನೆ. ತನಿಖೆ ನಂತರ ಸ್ಪಷ್ಟತೆ ದೊರಕಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.