ಪ್ರತಿ ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿನ ಘಟಕ

| Published : Nov 04 2025, 12:00 AM IST

ಸಾರಾಂಶ

ಸೋಂಪುರ ಹೋಬಳಿಯ ನರಸೀಪುರ ಗ್ರಾ.ಪಂ. ವ್ಯಾಪ್ತಿಯ ಸಾಲಹಟ್ಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಚಾಲನೆ ನೀಡಿ ಮಾತನಾಡಿದರು.

ದಾಬಸ್‍ಪೇಟೆ: ಗ್ರಾಮೀಣ ಜನರ ಆರೋಗ್ಯ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಅಗತ್ಯವಿರುವ ಗ್ರಾಮಗಳಿಗೆ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡುತ್ತಿದ್ದೇವೆ ಎಂದು ಶಾಸಕ ಎನ್. ಶ್ರೀನಿವಾಸ್ ಹೇಳಿದರು.

ಸೋಂಪುರ ಹೋಬಳಿಯ ನರಸೀಪುರ ಗ್ರಾ.ಪಂ. ವ್ಯಾಪ್ತಿಯ ಸಾಲಹಟ್ಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಚಾಲನೆ ನೀಡಿ ಮಾತನಾಡಿದರು.

ಮುಖಂಡ ಅಗಳಕುಪ್ಪೆ ಗೋವಿಂದರಾಜು ಮಾತನಾಡಿ, ಪ್ರತಿ ಗ್ರಾಮದಲ್ಲಿಯೂ ಶುದ್ಧ ನೀರಿನ ಘಟಕಗಳನ್ನು ತೆರೆದು ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ನಮ್ಮ ಶಾಸಕರಿಗೆ ಮನವಿ ಮಾಡಿದ ಹೋಬಳಿಯಾದ್ಯಂತ ಪಟ್ಟಿ ಮಾಡಿ ಅತೀ ಅವಶ್ಯಕವಿರುವ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಿ ಜನತೆಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್, ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಎನ್‌ಪಿಎ ಸದಸ್ಯ ಅಂಚೆಮನೆ ಪ್ರಕಾಶ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಸಾದಿಕ್ ಪಾಷ, ಗ್ರಾ.ಪಂ. ಅಧ್ಯಕ್ಷರಾದ ರಾಮಾಂಜೀನಯ್ಯ, ವನಿತಾ ಸದಸ್ಯರಾದ ಶಿವಕುಮಾರ್, ಖಲೀಂ ಉಲ್ಲಾ, ದಿನೇಶ್ ನಾಯಕ್, ಮನುಪ್ರಸಾದ್, ಮುಖಂಡರಾದ ನಯಾಜ್ ಖಾನ್, ನಾರಾಯಣಸ್ವಾಮಿ, ಸಿದ್ದರಾಜು, ಪಾರ್ಥ, ಯೋಗಾನಂದೀಶ್, ಚಿಕ್ಕಣ್ಣ, ಹನುಮಂತರಾಜು, ಚಂದ್ರಶೇಖರ್, ಪ್ರವೀಣ್ ಇನ್ನೀತರರಿದ್ದರು.

ಪೋಟೋ 6 : ಸೋಂಪುರ ಹೋಬಳಿಯ ನರಸೀಪುರ ಗ್ರಾ.ಪಂ.ವ್ಯಾಪ್ತಿಯ ಸಾಲಹಟ್ಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಶಾಸಕ ಎನ್. ಶ್ರೀನಿವಾಸ್, ಮಾಜಿ ಶಾಸಕ ಗೌರಿಶಂಕರ್ ಹಾಗೂ ಮುಖಂಡರು ಚಾಲನೆ ನೀಡಿದರು.