ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯ

| Published : Dec 23 2024, 01:03 AM IST / Updated: Dec 23 2024, 01:04 AM IST

ಸಾರಾಂಶ

ಚಿತ್ರದುರ್ಗ: ಸ್ವಚ್ಛ ಶನಿವಾರ ಕಾರ್ಯಕ್ರಮ-ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಅಭಿಯಾನದ ಅಂಗವಾಗಿ ಚಿತ್ರದುರ್ಗ ತಾಲೂಕು ಪಂಚಾಯತಿ ಅಧಿಕಾರಿ ಮತ್ತು ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಸ್ವಚ್ಛತಾ ಕಾರ್ಯ ನಡೆಸಿದರು.

ಚಿತ್ರದುರ್ಗ: ಸ್ವಚ್ಛ ಶನಿವಾರ ಕಾರ್ಯಕ್ರಮ-ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಅಭಿಯಾನದ ಅಂಗವಾಗಿ ಚಿತ್ರದುರ್ಗ ತಾಲೂಕು ಪಂಚಾಯತಿ ಅಧಿಕಾರಿ ಮತ್ತು ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಸ್ವಚ್ಛತಾ ಕಾರ್ಯ ನಡೆಸಿದರು. ಈ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಪ್ರಧಾನ ಮಂತ್ರಿಗಳ ಸ್ವಚ್ಛ ಭಾರತದ ಕನಸಿನ ಸಾಕಾರಕ್ಕೆ ನಾವೆಲ್ಲರೂ ಸ್ವಯಂ ಪ್ರೇರಿತವಾಗಿ ಭಾಗವಹಿಸಿ, ದೇಶದ ಸ್ವಚ್ಛತೆಗೆ ಕೈ ಜೋಡಿಸಲು ಪ್ರತಿ ಶನಿವಾರ ಒಂದು ಗಂಟೆ ಸ್ವಚ್ಛತಾ ಶ್ರಮದಾನಕ್ಕೆ ಮೀಸಲಿಡಬೇಕಿದೆ ಎಂದು ಹೇಳಿದರು. ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಶನಿವಾರ ಚಾಲನೆಯಲ್ಲಿದ್ದು, ಸ್ವಚ್ಛತೆ ಮತ್ತು ಹೆಚ್ಚಿನ ಜಾಗೃತಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ವಾರದ ಮೊದಲೇ ಒಂದು ಗ್ರಾಮವನ್ನು ಆಯ್ಕೆ ಮಾಡಿ, ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳೀಯ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರನ್ನು ಒಡಗೂಡಿಸಿಕೊಂಡು ಸ್ವಚ್ಛತೆಗೆ ಶ್ರಮದಾನ ಮಾಡುತ್ತಾ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಬೇಕಿದೆ ಎಂದರು. ಚಿತ್ರದುರ್ಗ ತಾಲೂಕು ಪಂಚಾಯಿತಿ ತಾಲೂಕು ಲೆಕ್ಕಾಧಿಕಾರಿ ಕೆಂಚಪ್ಪ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ನರೇಗಾ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಎಚ್.ಎರ್ರಿಸ್ವಾಮಿ, ಆರ್.ರೂಪಾಕುಮಾರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗುರುರಾಜ್, ವ್ಯವಸ್ಥಾಪಕ ಇರ್ಫಾನ್, ಅಧಿಕಾರಿಗಳಾದ ನಾಸಿರ್, ಮಹಾಲಕ್ಷ್ಮೀ, ತಾಂತ್ರಿಕ ಸಂಯೋಜಕ ಪ್ರತಾಪ್, ಎಂಐಎಸ್ ಉಮೇಶ್, ಐಇಸಿ ಸತ್ಯನಾರಾಯಣ ಇದ್ದರು.