ಸಾರಾಂಶ
ಸಾರ್ವಜನಿಕರು ತಮ್ಮ ತಮ್ಮ ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು .
ಶ್ರೀರಂಗಪಟ್ಟಣ: ಮಾರಕ ಡೆಂಘೀ ರೋಗದಿಂದ ತಪ್ಪಿಸಿಕೊಳ್ಳಲು ಸ್ವಚ್ಛತೆ ಹಾಗೂ ಜಾಗೃತಿ ಒಂದೇ ಪರಿಹಾರ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್ ಹೇಳಿದರು. ತಾಲೂಕಿನ ಮೊಗರಹಳ್ಳಿ ಮಂಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಹಳ್ಳಿ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಡೆಂಘೀ ವಿರೋಧಿ ಮಾಸಾಚರಣೆಯಲ್ಲಿ ಮಾತನಾಡಿ, ಸಾರ್ವಜನಿಕರು ತಮ್ಮ ತಮ್ಮ ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ ಹೇಮಣ್ಣ , ಡೆಂಘೀ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು. ಗ್ರಾಪಂ ಸದಸ್ಯರಾದ ತರುಣ್, ವಿಶ್ವನಾಥ, ಎಲಿಜಬೆತ್ ರಾಣಿ, ಉಮಾ, ಮುಖ್ಯ ಶಿಕ್ಷಕಿ ಶಕುಂತಲಾ, ಸಮುದಾಯ ಆರೋಗ್ಯ ಅಧಿಕಾರಿ ನಂದಿನಿ, ಆರೋಗ್ಯ ನಿರೀಕ್ಷಣಾಧಿಕಾರಿ ರಮ್ಯಾ ಪಿ., ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆ ಸಿಂಧು, ಪಲ್ಲವಿ, ಸುವರ್ಣಮ್ಮ ಹಾಗೂ ಸ್ವಸಹಾಯ ಸಂಘದ ಸದಸ್ಯರು, ಶಾಲಾ ಮಕ್ಕಳು ಹಾಜರಿದ್ದರು.