ಸಾರಾಂಶ
ಸ್ವಚ್ಛ ಕೊಡಗು ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನ ನಡೆಯಿತು. ಮುಖ್ಯ ರಸ್ತೆಯುದ್ದಕ್ಕೂ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಲಾಯಿತು.
ನಾಪೋಕ್ಲು: ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು - ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನದಲ್ಲಿ ಸ್ಥಳೀಯ ಪ್ಲಾಂಟಸ್ ಕ್ಲಬ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಭಾಗವಹಿಸಿ ಪಟ್ಟಣದ ಮುಖ್ಯ ರಸ್ತೆಯುದ್ಧಕ್ಕೂ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ಲಾಂಟಸ್ ಕ್ಲಬ್ ಅಧ್ಯಕ್ಷ ಬಾಚ ಮಂಡ ಲವ ಚಿನ್ನಪ್ಪ, ಚೆಕ್ ಪುವಂಡ, ಅಪ್ಪಚ್ಚು, ಶಿವಚಳಿಯಂಡ ಅಂಬಿ ಕಾರ್ಯಪ್ಪ, ಅರೆಯಡ ರತ್ನ, ಕಲಿಯಂಡರ ಕೌಶಿಕ್ ಹಾಗೂ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ತಂಡದ ತಾಲೂಕು ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ, ಶೌರ್ಯ ತಂಡದ ಸದಸ್ಯರು ಪಾಲ್ಗೊಂಡಿದ್ದರು.