ಕನ್ನಡಪ್ರಭ ವಾರ್ತೆ ಚಿಕ್ಕಮಗಳೂ
ಪಶ್ಚಿಮ ಘಟ್ಟದ ಪ್ರಮುಖ ಪರಿಸರ ಸೂಕ್ಷ್ಮ ಪ್ರದೇಶವಾದ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಮೂಲಕ ಸಹಕಾರ ನೀಡಬೇಕೆಂದು ಶಾಸಕ ನಯನಾ ಮೋಟಮ್ಮ ಹೇಳಿದರು.ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ನಿಂದ ಸೋಮವಾರ ಚಾರ್ಮಾಡಿ ಘಾಟ್‌ನಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ ಚಾರ್ಮಾಡಿ ಘಾಟ್ ಪಶ್ಚಿಮ ಘಟ್ಟದ ಪ್ರಮುಖ ಪರಿಸರ ಸೂಕ್ಷ್ಮ ಪ್ರದೇಶವಾಗಿದೆ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿ ಗರು ಭೇಟಿ ನೀಡುತ್ತಾರೆ. ಪ್ರವಾಸಿಗರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಪರಿಸರದ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ವಹಿಸಬೇಕು ಎಂದು ಹೇಳಿದರು.ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಪರಿಸರ ಉಳಿದರೆ ಮಾತ್ರ ಮುಂದಿನ ಪೀಳಿಗೆಗೆ ಸುರಕ್ಷಿತ ಭವಿಷ್ಯ ನಿರ್ಮಿಸಲು ಸಾಧ್ಯ. ಪರಿಸರ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಇಲಾಖೆಗಳ ಜವಾಬ್ದಾರಿ ಯಲ್ಲ. ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಇಂತಹ ಅಭಿಯಾನಗಳು ಯಶಸ್ವಿ ಯಾಗಲು ಸಾಧ್ಯ. ಪ್ರಕೃತಿಯ ಸೌಂದರ್ಯ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕರೆ ನೀಡಿದರು.ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಸಾರ್ವ ಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೂಡಿಗೆರೆ ತಾಲೂಕಿನ ಇಒ ದಯಾ ವತಿ, ಪಂಚಾಯತ್ ಅಧಿಕಾರಿ, ಸಿಬ್ಬಂದಿ, ಪೊಲೀಸ್ ಇಲಾಖೆ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.ಫೋಟೋ
ಚಾರ್ಮಾಡಿ ಘಾಟ್‌ನಲ್ಲಿ ಸೋಮವಾರ ಶಾಸಕಿ ನಯನಾ ಮೋಟಮ್ಮ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ ನಡೆಸಲಾಯಿತು. ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ, ಕಾಂಗ್ರೆಸ್ ಕಾರ್ಯಕರ್ತರಿದ್ದರು.