ಸ್ವಚ್ಛತೆ, ಕುಡಿವ ನೀರಿಗೆ ಆದ್ಯತೆ

| Published : Feb 07 2025, 12:31 AM IST

ಸಾರಾಂಶ

ರಾಮನಗರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ 15ನೇ ಹಣಕಾಸು ಯೋಜನೆಯಡಿ ಚರಂಡಿ ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ರಾಮನಗರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ 15ನೇ ಹಣಕಾಸು ಯೋಜನೆಯಡಿ ಚರಂಡಿ ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಬೇಸಿಗೆ ಆರಂಭವಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದರು.

ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗಲಿದೆಯೋ ಅಂತಹ ಸ್ಥಳದಲ್ಲಿ ಟ್ಯಾಂಕರ್ ನೀರು ವ್ಯವಸ್ಥೆ ಮಾಡಭೆಕು. ಮಂಚನಬೆಲೆ ಎಡ ಹಾಗೂ ಬಲ ದಂಡೆಗಳಲ್ಲಿ ಜನವರಿ ಅಂತ್ಯದೊಳಗೆ ನೀರು ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಅಂದು ಕೇವಲ 10 ಕಿಲೋ ಮೀಟರ್ ಮಾತ್ರ ಇತ್ತು. ಆದರೆ ಪ್ರಸ್ತುತ ಯೋಜನೆಯು 20 ಕಿಲೋ ಮೀಟರ್ ವಿಸ್ತೀರ್ಣವಾಗಿದೆ. ಈ 20 ಕಿಲೋಮೀಟರ್ ಕಾಮಗಾರಿ ಶೇ.90ರಷ್ಟು ಪೂರ್ಣವಾಗಿದ್ದು, ಶೀಘ್ರದಲ್ಲಿಯೇ ಚಾಲ್ತಿಗೆ ಬರಲಿದೆ ಎಂದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನ 20 ಕೋಟಿಯಲ್ಲಿ ಕ್ಷೇತ್ರದ ಪ್ರತಿ ಪಂಚಾಯಿತಿಯಲ್ಲಿ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಕಳೆದ ಸುಮಾರು ವರ್ಷಗಳಿಂದ ಅಭಿವೃದ್ಧಿ ಕೆಲಸಗಳು ನಿಂತ ನೀರಾಗಿತ್ತು. ಈ ಹಿಂದೆ ಅಧಿಕಾರದಲ್ಲಿದ್ದವರು ರಸ್ತೆ, ಚರಂಡಿ ಕೆಲಸಕ್ಕೆ ಯಾರು ಗಮನ ನೀಡಿರಲಿಲ್ಲ. ತಾಪಂ, ಜಿಪಂ ಅನುದಾನ ಸೇರಿದಂತೆ ವಿವಿಧ ಇಲಾಖೆಗಳ ಅನುದಾನ ಪಡೆದುಕೊಂಡು ವಿವಿಧ ಅಭಿವೃದ್ಧಿ ಕೆಲಸ ನಿರ್ವಹಿಸಲಾಗುತ್ತಿದೆ. ಕ್ಷೇತ್ರದಲ್ಲಿ ಕೆಲವು ಶುದ್ಧ ಕುಡಿಯುವ ನೀರಿನ ಘಟಕಗಳು ದುರಸ್ತಿಯಾಗಿದೆ. ಇನ್ನು ಕೆಲವೆಡೆ ಅವುಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ಹಾಗಾಗಿ ಶಾಸಕರ ಅನುದಾನದಲ್ಲಿ ಅವುಗಳನ್ನು ರಿಪೇರಿ ಮಾಡಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಕೆಎಂಎಫ್‌ ಮಾಜಿ ಅಧ್ಯಕ್ಷ ಪಿ.ನಾಗರಾಜು, ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ, ಉಪಾಧ್ಯಕ್ಷ ವೀರಭದ್ರಸ್ವಾಮಿ, ಮುಖಂಡರಾದ ಆರ್.ದೊಡ್ಡವೀರಯ್ಯ, ಮಂಜುಳಾ ಮರಿದೇವರು, ಪುಟ್ಟಣ್ಣ, ರವಿ, ಸತೀಶ್, ಮಂಚೇಗೌಡ, ವೆಂಕಟೇಶ್, ಸಿದ್ದಪ್ಪ, ಪಿಡಿಓ ದಯಾನಂದಸಾಗರ್, ರಂಜಿತ್ ಸೇರಿದಂತೆ ಇಲಾಖಾ ಅಧಿಕಾರಿಗಳಿದ್ದರು.

5ಕೆಆರ್ ಎಂಎನ್ 6.ಜೆಪಿಜಿ

ರಾಮನಗರ ತಾಲೂಕು ಹರೀಸಂದ್ರ ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಕುಂದು ಕೊರತೆ ಆಲಿಸುವ ಸಭೆಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರು ರೈತರಿಗೆ ಹಕ್ಕು ಪತ್ರ ವಿತರಿಸಿದರು.