ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮತ್ತು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಲಯನ್ಸ್ ಕ್ಲಬ್ ಸದಸ್ಯರು ಅನಗತ್ಯ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತಾ ಆಂದೋಲನ ನಡೆಸಿತು.ಸಂಸ್ಥೆ ಅಧ್ಯಕ್ಷ ಎನ್.ಕೆ.ಕುಮಾರ್ ಮಾತನಾಡಿ, ಸಂಸ್ಥೆ ಜಿಲ್ಲಾ ರಾಜ್ಯಪಾಲ ಸುಬ್ರಹ್ಮಣ್ಯರ ಆದೇಶದ ಮೇರೆಗೆ ಸ್ವಚ್ಛತಾ ಆಂದೋಲನ ನಡೆಸಲಾಗುತ್ತಿದೆ. ದೇಶ ಸ್ವಚ್ಛತೆಯಿಂದ ಇರಬೇಕು ಎಂಬ ಮಹಾತ್ಮ ಗಾಂಧಿಯವರ ಕನಸು ನನಸು ಮಾಡಲು, ಪರಿಸರವನ್ನು ಚೆನ್ನಾಗಿ ಇಟ್ಟುಕೊಂಡರೆ ನಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಪ್ರತಿಯೊಬ್ಬರೂ ನಿಮ್ಮ ಮನೆ ಅಂಗಳಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ನಿಂತುಕೊಳ್ಳುವುದರಿಂದ ಸೊಳ್ಳೆಗಳು ಜಾಸ್ತಿಯಾಗಿ ಮಲೇರಿಯಾ , ಡೆಂಘೀ ಇಂತಹ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಮರ ಗಿಡಗಳನ್ನು ಬೆಳೆಸಿದರೆ ಉತ್ತಮ ಆಮ್ಲಜನಕದ ಜೊತೆಗೆ ಸಕಾಲಕ್ಕೆ ಸಮೃದ್ಧಿ ಮಳೆಯಾಗುತ್ತದೆ ಎಂದು ಹೇಳಿದರು.ಈ ವೇಳೆ ಲಯನ್ಸ್ ಕ್ಲಬ್ ಸದಸ್ಯರಾದ ಶಿವರಾಜು, ಡಿ.ಎಲ್.ಮಾದೇಗೌಡ, ಎಲ್ ಐಸಿ ಗುರು, ಎಚ್.ವಿ.ರಾಜು, ಮುನಿರಾಜ್, ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.
25ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಮಂಡ್ಯ:ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.25ರಂದು 2023-24 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.
ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಸ್ಪರ್ಧೆಗಳು- 100, 200, 400, 800, 1500, 3000 (ಮಹಿಳೆಯರಿಗೆ), 5000 (ಪುರುಷರಿಗೆ), 10000 (ಪುರುಷರಿಗೆ), ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ & 4*400ಮೀ ರಿಲೇ ಹಾಗೂ ಸ್ಪರ್ಧೆಗಳಾದ ಖೋ-ಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಫುಟ್ ಬಾಲ್, ಯೋಗ, ಜಿಲ್ಲಾ ಮಟ್ಟದಲ್ಲಿ ನೇರವಾಗಿ ನಡೆಸುವ ಸ್ಪರ್ಧೆಗಳಾದ ಬ್ಯಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಹಾಕಿ ಹಾಗೂ ಕುಸ್ತಿ, ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡುವ ಸ್ಪರ್ಧೆಗಳು ಈಜು, ಲಾನ್ ಟೆನ್ನಿಸ್, ನೆಟ್ ಬಾಲ್ ಸ್ಪರ್ಧೆಗಳು ನಡೆಯಲಿವೆ.ತಾಲೂಕು ಮಟ್ಟದಲ್ಲಿ ಆಯೋಜಿಸಿದ್ದ ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿರುವ ಹಾಗೂ ರಿಲೇ ಸಹಿತ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ಕ್ರೀಡಾಪಟುಗಳು / ಆಯ್ಕೆ ತಂಡಗಳು ಹಾಗೂ ನೇರ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.ಜಿಲ್ಲಾ ಮಟ್ಟದಲ್ಲಿ ವಿಜೇತರಾಗುವ ಸ್ಪರ್ಧೆಗಳು ಕಡ್ಡಾಯವಾಗಿ ಇತ್ತೀಚಿನ 2 ಭಾವಚಿತ್ರಗಳು, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರಾಷ್ಟೀಕೃತ ಬ್ಯಾಂಕ್ ಪಾಸ್ ಬುಕ್ ನ ಮೊದಲ ಪುಟದ ಜೆರಾಕ್ಸ್ ಪ್ರತಿ ಕಡ್ಡಾಯವಾಗಿ ನೀಡಲು ತಿಳಿಸದೆ.ಹೆಚ್ಚಿನ ಮಾಹಿತಿಗಾಗಿ ಭರತ್‌ರಾಜ್: ಮೊ-9916644007, ಸೋಮಶೇಖರ್ :ಮೊ- 9740896699, ರೂಪಶ್ರೀ ಕೆ.ಜೆ ಮೊ-7353097540 ಅನ್ನು ಸಂಪರ್ಕಿಸಬಹುದು ಎಂದು ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.