ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯ

| Published : Jan 12 2025, 01:15 AM IST

ಸಾರಾಂಶ

ಕಾವೇರಿ ನದಿ ಸಂರಕ್ಷಣೆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ತಂಡ ಹೊಂದಿದೆ. ನದಿಯ ಉಳಿವಿಗೆ ನಾಗರಿಕರು ಕೈಜೋಡಿಸುವಂತೆ ಸಾರ್ವಜನಿಕರಲ್ಲಿ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಪಾರುಪತ್ತೇಗಾರ್ ರಮೇಶ್ ಭಟ್ ಮನವಿ ಮಾಡಿದರು. ಧಾರ್ಮಿಕ ಕೇಂದ್ರಗಳು ಮನುಕುಲಕ್ಕೆ ಬದುಕುವ ರೀತಿಯಲ್ಲಿ ತಿಳಿಸುವ ಕೇಂದ್ರಗಳೂ ಅಗಿವೆ ಎಂದರು.

ರಾಮನಾಥಪುರ: ಕಾವೇರಿ ನದಿ ಸಂರಕ್ಷಣೆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ತಂಡ ಹೊಂದಿದೆ. ನದಿಯ ಉಳಿವಿಗೆ ನಾಗರಿಕರು ಕೈಜೋಡಿಸುವಂತೆ ಸಾರ್ವಜನಿಕರಲ್ಲಿ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಪಾರುಪತ್ತೇಗಾರ್ ರಮೇಶ್ ಭಟ್ ಮನವಿ ಮಾಡಿದರು.

ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ನಡೆದ ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳು ಮನುಕುಲಕ್ಕೆ ಬದುಕುವ ರೀತಿಯಲ್ಲಿ ತಿಳಿಸುವ ಕೇಂದ್ರಗಳೂ ಅಗಿವೆ. ಈ ಕೇಂದ್ರಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಗ್ರಾಮ ಪಂಚಾಯತಿ ಅಧ್ಯಕ್ಷೆ ಪವನಕುಮಾರಿ, ಪಂಡಿತರಾದ ಹರಳಹಳ್ಳಿ ಶ್ರೀ ಕಂಠಾರಾಧ್ಯರು, ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ, ತಾಲೂಕು ಅಧ್ಯಕ್ಷರು ಸಿದ್ದರಾಜು, ತಾ. ರೋಟರಿ ಅಧ್ಯಕ್ಷರು ವಿಜಯಕುಮಾರ್, ಧರ್ಮಸ್ಥಳ ಸಂಘದ ಯೋಜನಾಧಿಕಾರಿ ಜಿನ್ನಪ್ಪ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಕಾರ್ಯದರ್ಶಿ ರೇವಣ್ಣ ಮುಂತಾದವರಿದ್ದರು.